ಸರ್ಕಾರದ ಆದೇಶ ಉಲ್ಲಂಘಿಸಿದ ಬಿಗ್ ಬಜಾರ್ ಮಾಲ್ ಗೆ ಡಿಸಿ ದಿಢೀರ್ ದಾಳಿ: ವ್ಯವಸ್ಥಾಪಕರ ವಿರುದ್ಧ ಕೇಸ್ ದಾಖಲಿಸುವಂತೆ ಸೂಚನೆ

ಉಡುಪಿ: ರಾಜ್ಯ ಸರ್ಕಾರ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಎಸಿ ಹಾಕಿಕೊಂಡು ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದ ನಗರದ ಬಿಗ್ ಬಜಾರ್ ಮಾಲ್ ಗೆ ಇಂದು ದಿಢೀರ್ ದಾಳಿ ನಡೆಸಿದ ಜಿಲ್ಲಾಧಿಕಾರಿ ಜಿ. ಜಗದೀಶ್ ಬಿಗ್ ಬಜಾರ್ ವ್ಯವಸ್ಥಾಪಕರನ್ನು‌ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ವ್ಯವಸ್ಥಾಪಕರ ಮೇಲೆ ಪ್ರಕರಣ ದಾಖಲಿಸುವಂತೆ ಎಸ್ಪಿ ವಿಷ್ಣುವರ್ಧನ್ ಅವರಿಗೆ ಸೂಚನೆ ನೀಡಿದ್ದಾರೆ. ಸರ್ಕಾರದ ಆದೇಶವನ್ನು ಯಾವುದು ಪಾಲಿಸಿಲ್ಲ. ಎಸಿ ಹಾಕಿಕೊಂಡು ಒಳಗಡೆ ವ್ಯಾಪಾರ ಮಾಡುತ್ತಿದ್ದೀರಾ ಎಂದು ಡಿಸಿ ವ್ಯವಸ್ಥಾಪಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. […]