ಸೇತುವೆ ಕೊಚ್ಚಿ ಹೋದ ಹಿನ್ನೆಲೆ ಬಿಹಾರದಲ್ಲಿ ನದಿಯ ಮಧ್ಯದಲ್ಲೇ ಸಿಲುಕಿದ ಜನತೆ!
ವೈಶಾಲಿ (ಬಿಹಾರ): ವೈಶಾಲಿ ಜಿಲ್ಲಾ ಕೇಂದ್ರದಿಂದ ರಘೋಪುರಕ್ಕೆ ಸಂಪರ್ಕ ಕಲ್ಪಿಸಲು ಗಂಗಾ ನದಿಗೆ ಅಡ್ಡಲಾಗಿ ತಾತ್ಕಾಲಿಕವಾದ ಈ ಪಿಪಾ ಸೇತುವೆ ನಿರ್ಮಿಸಲಾಗಿತ್ತು. ಆದರೆ, ಮಳೆ ಜೊತೆಗೆ ಬಲವಾದ ಗಾಳಿಗೆ ಅದು ಕೊಚ್ಚಿಕೊಂಡು ಹೋಗಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇತುವೆ ದಾಟುತ್ತಿದ್ದರು. ಏಕಾಏಕಿ ಉಂಟಾದ ಅವಘಡದಿಂದ ಜನರು ನದಿಯ ಮಧ್ಯದಲ್ಲೇ ಸಿಲುಕಿಕೊಂಡಿದ್ದರು. ಬಳಿಕ ಜಿಲ್ಲಾಡಳಿತ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಿದೆ. ಬಿಹಾರದಲ್ಲಿ ಮತ್ತೊಂದು ಸೇತುವೆ ಕೊಚ್ಚಿಕೊಂಡು ಹೋಗಿದೆ. ಭಾಗಲ್ಪುರ ಜಿಲ್ಲೆಯಲ್ಲಿ ಇತ್ತೀಚಿಗೆ ಬಹುಕೋಟಿ ವೆಚ್ಚದ […]