ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಬೈಕ್ ರ‍್ಯಾಲಿ
ಉಡುಪಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ನಡೆಯುವ ಬೈಕ್ ರ‍್ಯಾಲಿಗೆ ಬ್ಲಾಗರ್ಸ್ ಮೀಟ್- ಪ್ರವಾಸೋದ್ಯಮ ಪುನರಾವಲೋಕನ ಎಂಬ ಸಂದೇಶದೊಂದಿಗೆ ಸೆಪ್ಟಂಬರ್ 27 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲದ ಜಿಲ್ಲಾಡಳಿತದ ಸಂಕೀರ್ಣದಲ್ಲಿ ಶಾಸಕ ಕೆ. ರಘುಪತಿ ಭಟ್ ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ […]