ಅತ್ಯಾಧುನಿಕ ಮಾದರಿಯ ನಾಲ್ಕು ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಪರಿಕಲ್ಪನೆ ಬಹಿರಂಗಪಡಿಸಿದ Ola
ಆಗಸ್ಟ್ 15 ರಂದು ಕೈಗೆಟುಕುವ ಹೊಸ Ola S1 X ಮತ್ತು Gen 2 Ola S1 Pro ಅನ್ನು ಬಹಿರಂಗಪಡಿಸುವುದರ ಜೊತೆಗೆ, Ola Electric ಇನ್ನೂ ನಾಲ್ಕು ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಪರಿಕಲ್ಪನೆಗಳನ್ನು ಬಹಿರಂಗಪಡಿಸಿದೆ. ಇವುಗಳು ಕ್ರೂಸರ್, ಎಡಿವಿ, ರೋಡ್‌ಸ್ಟರ್ ಮತ್ತು ಕಂಪನಿಯು ಡೈಮಂಡ್‌ಹೆಡ್ ಎಂದು ಕರೆಯುವ ಫ್ಯೂಚರಿಸ್ಟಿಕ್-ಲುಕಿಂಗ್ ಸ್ಪೋರ್ಟ್‌ಬೈಕ್ ಅನ್ನು ಹೊಂದಿದೆ. ಬೈಕ್‌ಗಳ ಕೆಲವೇ ವಿವರಗಳನ್ನು ತೋರಿಸಲಾಗಿದೆ ಮತ್ತು ಬಹುಮಟ್ಟಿಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ಹಂಚಿಕೊಳ್ಳಲಾಗಿಲ್ಲ. ಎಲ್ಲಾ ನಾಲ್ಕು ಉತ್ಪನ್ನಗಳು ಭವಿಷ್ಯದ ವಿನ್ಯಾಸ ತತ್ವಶಾಸ್ತ್ರವನ್ನು ಅಳವಡಿಸಿಕೊಂಡಿವೆ. […]
ಕುಂದಾಪುರ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕ್ರೇನ್; ಸ್ಥಳದಲ್ಲೇ ಅಸುನೀಗಿದ ಸಹಸವಾರ
ಕುಂದಾಪುರ: ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕ್ರೇನ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಅಸುನೀಗಿದ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿ ಡಿ.26ರಂದು ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ತಾಲೂಕಿನ ಹುಣಸೆಮಕ್ಕಿ ಸಮೀಪದ ಹೊಂಬಾಡಿ ನಿವಾಸಿ ಪ್ರಶಾಂತ್ ಮೊಗವೀರ (31) ಮೃತಪಟ್ಟವರು ಎಂದು ಗುರುತಿಸಲಾಗಿದೆ. ದಿನೇಶ್ ಪೂಜಾರಿ ಎಂಬವರ ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಪ್ರಶಾಂತ್, ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದಾಗ ನೋಂದಣಿ ಸಂಖ್ಯೆ ಇಲ್ಲದ ಹೊಸ […]
ಕಟಪಾಡಿ: ಬೈಕ್ ಗೆ ಲಾರಿ ಢಿಕ್ಕಿ; ಸಹಸವಾರ ಮೃತ್ಯುವಶ
ಕಟಪಾಡಿ: ಸ್ಕೂಟರ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ನಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಉದ್ಯಾವರ ಬೊಳ್ಜೆಯ ಮೂಲದ ಸುಶಿಕ್ಷಿತ್ (20) ಎಂದು ಗುರುತಿಸಲಾಗಿದೆ. ಸುಶಿಕ್ಷಿತ್ ತನ್ನ ಗೆಳೆಯ ಜಯದೀಪ್ ಜೊತೆಗೆ ಕೆಟರೀಂಗ್ ಕೆಲಸಕ್ಕಾಗಿ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸುಶಿಕ್ಷಿತ್ ನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಅಫಘಾತದಿಂದ […]
ಕಂಬದಕೋಣೆ ಬಳಿ ಬೈಕ್ ಅಪಘಾತ: ಆಂಧ್ರ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತ್ಯುವಶ
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಂಬದಕೋಣೆ ಬಳಿಯ ಸೇತುವೆ ಸಮೀಪ ಬೈಕ್ ಸ್ಕಿಡ್ ಆಗಿದ್ದು, ಸವಾರರಿಬ್ಬರು ಸಾವನ್ನಪ್ಪಿದ ದುರ್ಘಟನೆ ಭಾನುವಾರ ಸಂಭವಿಸಿದೆ. ಆಂಧ್ರಪ್ರದೇಶದ ಆದಿತ್ಯ ರೆಡ್ಡಿ(18) ಮತ್ತು ತರುಣ್ ಕುಮಾರ್ ರೆಡ್ಡಿ( 19) ಸಾವನಪ್ಪಿದವರು. ಇವರಿಬ್ಬರೂ ಉಡುಪಿಯ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳಾಗಿದ್ದಾರೆ. ಸವಾರರು ಕುಂದಾಪುರ ಕಡೆಯಿಂದ ಬೈಂದೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸುದ್ದಿ ತಿಳಿದ ತಕ್ಷಣ ಗಂಗೊಳ್ಳಿಯ 24*7 ಆಪತ್ಭಾಂಧವ ಆಂಬ್ಯುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. […]
ಉಡುಪಿ: ಇಬ್ಬರು ಬೈಕ್ ಕಳ್ಳರ ಬಂಧನ
ಉಡುಪಿ: ಜುಲೈ 2ರಂದು ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿ ಕಿನ್ನಿಮುಲ್ಕಿಯಲ್ಲಿ ಎರಡು ಪಲ್ಸರ್ ಬೈಕ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಮಲ್ಪೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮಂಗಳೂರಿನ ವಳಚಿಲ್ ನಿವಾಸಿಗಳಾದ ಮಹಮ್ಮದ್ ಸಮೀರ್(21), ಮೊಹಮ್ಮದ್ ಅಲ್ತಾಪ್ (21) ಬಂಧಿತ ಆರೋಪಿಗಳು. ನಗರದ ಕರಾವಳಿ ಬೈಪಾಸ್‌ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 80 ಸಾವಿರ ಮೌಲ್ಯದ 2 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಮಲ್ಪೆ ಪಿಎಸ್‌ಐ ಮಧು ಬಿ.ಇ, ಎಎಸ್‌ಐ ಸುದಾಕರ ಬಿ, ಎಎಸ್‌ಐ ರತ್ನಾಕರ ಕೆ, ಹೆಡ್‌ಕಾನ್‌ಸ್ಟೇಬಲ್ಗಳಾದ ರತ್ನಾಕರ, ಪ್ರವೀಣ್, ಸಂತೋಷ್, […]