ಬಿಲ್ಲವ ಮುಸ್ಲಿಮ್ ಸ್ನೇಹ ಸಮಾವೇಶ ಮುಂದೂಡಿಕೆ, ತಮ್ಮ ಸ್ವಾರ್ಥ ಹಿತಾಸಕ್ತಿಗಳಿಗಾಗಿ ಕೆಲವರಿಂದ ಕೀಳುಮಟ್ಟದ ಕುತಂತ್ರ: ಸೊರಕೆ ಆರೋಪ
ಉಡುಪಿ: ಇದೇ 11ರಂದು ಉಡುಪಿಯಲ್ಲಿ ನಡೆಯಬೇಕಿದ್ದ ಬಿಲ್ಲವ ಮತ್ತು ಮುಸ್ಲಿಮ್ ಸ್ನೇಹ ಸಮಾವೇಶ ವಿರುದ್ಧ ಕೆಲವರು ಗೊಂದಲ ಸೃಷ್ಟಿಸಿ, ತಮ್ಮ ಸ್ವಾರ್ಥ ಹಿತಾಸಕ್ತಿಗಾಗಿ ಸಮಾಜ ಮತ್ತು ಸಮುದಾಯದ ಒಳಿತನ್ನು ಬಲಿಕೊಟ್ಟು ಕೀಳುಮಟ್ಟದ ಕುತಂತ್ರ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಸಮಾವೇಶದ ಸ್ವಾಗತ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು. ಅಜ್ಜರಕಾಡಿನ ಪುರಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಗತ್ಯವಾಗಿ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಿಸಿ ಶುದ್ಧ ಸುಳ್ಳುಗಳನ್ನು ಪಸರಿಸುತ್ತಿದ್ದಾರೆ. ನಮ್ಮ ಸ್ವಾಗತ ಸಮಿತಿಯ ಸದಸ್ಯರು ಮತ್ತು […]