ಮೈಸೂರು: ಕಾಡುಗಳ್ಳ ವೀರಪ್ಪನ್ ಸಹಚರ ಬಿಲ್ವೇಂದ್ರನ್ ಸಾವು
ಮೈಸೂರು: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲ್ವೇಂದ್ರನ್ (70) ಕೆ.ಆರ್. ಆಸ್ಪತ್ರೆಯಲ್ಲಿ ಬುಧವಾರ ತಡರಾತ್ರಿ ಸಾವನ್ನಾಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈತ ಕಳೆದ 25 ವರ್ಷಗಳಿಂದ ಮೈಸೂರಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ. ಹತ್ತು ದಿನಗಳ ಹಿಂದೆ ಜೈಲಿನಲ್ಲಿ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದ ಈತನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಚಾಮರಾಜನಗರ ಜಿಲ್ಲೆಯ ಗಡಿಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಪೋಟಿಸಿ 22 ಮಂದಿ ಸಾವಿಗೆ […]