ಬಿಪರ್‌ಜೋಯ್ ಚಂಡಮಾರುತದ ಪರಿಸ್ಥಿತಿ ಕುರಿತು ಸಭೆ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: ಬಿಪರ್‌ಜೋಯ್ ಚಂಡಮಾರುತವು ಗುರುವಾರದ ವೇಳೆಗೆ ತೀವ್ರ ಸ್ವರೂಪ ಪಡೆದು ಗುಜರಾತ್‌ಗೆ ಅಪ್ಪಳಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಬಿಪರ್‌ಜೋಯ್ ಚಂಡಮಾರುತದ ಪರಿಸ್ಥಿತಿ ಮತ್ತು ಸನ್ನದ್ಧತೆಯ ಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಿ ಅವಲೋಕಿಸಿದರು. ಬಿಪರ್‌ಜೋಯ್ ಚಂಡಮಾರುತದ ಪರಿಸ್ಥಿತಿ ಮತ್ತು ಸನ್ನದ್ಧತೆಯ ಸ್ಥಿತಿ ಕುರಿತು ಪ್ರಧಾನಿ ಮೋದಿ ಇಂದು ಉನ್ನತ ಮಟ್ಟದ ಸಭೆ ನಡೆಸಿದರು. ಮತ್ತೊಂದೆಡೆ, ಗುಜರಾತ್‌ನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಸುಮಾರು 1,300 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆಯ […]