ಉಡುಪಿ ಬಿಷಪ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ದೂರು ದಾಖಲು

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ ವಿರುದ್ದ ಕೆಟ್ಟ ಭಾಷೆಯಲ್ಲಿ ನಿಂದಿಸಿರುವ ವ್ಯಕ್ತಿಯ  ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಮನವಿ ಸಲ್ಲಿಸಲಾಯಿತು. 2020 ರ ಜನವರಿ 19ರಂದು ಭಾನುವಾರ ಉಡುಪಿ ಜಿಲ್ಲೆಯ ಸಂತೆಕಟ್ಟೆ ಮೌಂಟ್ ರೋಸರಿ ಚರ್ಚಿನ ಆವರಣದಲ್ಲಿ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಕೆಥೊಲಿಕ್ ಕ್ರೈಸ್ತರ ಬೃಹತ್ ಸಮಾವೇಶಜರುಗಿದ್ದು ಇದರ ಉದ್ಘಾಟನೆಯನ್ನು ಉಡುಪಿ ಧರ್ಮಾಧ್ಯಕ್ಷರಾದ […]