ತುಳುವರ ಹೊಸವರ್ಷ ‘ಬಿಸು’ ಹಬ್ಬದಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಈ ಕೆಳಗಿನಂತಿದೆ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎಪ್ರಿಲ್ 14 ರಂದು ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಈ ಹಿನ್ನಲೆ ಮಂಗಳೂರು ನಗರಕ್ಕೆ ಆಗಮಿಸುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ ಎಪ್ರಿಲ್ 14 ರಂದು ಈ ಕೆಳಗಿನ ವ್ಯವಸ್ಥೆಗಳನ್ನು ಪೊಲೀಸ್ ಇಲಾಖೆ ಮಾಡಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ದಿನಾಂಕ 14-04-2024 ರಂದು ಮಧ್ಯಾಹ್ನ 02-00 ಗಂಟೆಯಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಣಯ ವ್ಯವಸ್ಥೆಯನ್ನು ಮಾಡಲಾಗಿದ್ದು, ವಾಹನಗಳ […]
ಶ್ರೀಕೃಷ್ಣ ಮಠದಲ್ಲಿ ಸೌರಯುಗಾದಿ ಉತ್ಸವ ಆಚರಣೆ
ಉಡುಪಿ: ಸೌರಯುಗಾದಿಯ ಪ್ರಯುಕ್ತ ಶುಕ್ರವಾರ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಮುಖ್ಯಪ್ರಾಣದೇವರ ಉತ್ಸವ ನಡೆಯಿತು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ನಂತರ ಚಂದ್ರಶಾಲೆಯಲ್ಲಿ ಪರ್ಯಾಯ ಮಠದ ವತಿಯಿಂದ ಶ್ರೀಪಾದರಿಗೆ ಗಂಧಾದಿ ಉಪಚಾರಗಳೊಂದಿಗೆ ಗೌರವ ಕಾಣಿಕೆ ಸಲ್ಲಿಸಲಾಯಿತು. ಪರ್ಯಾಯ ಮಠದ […]