ಪೆಟ್ರೋಲ್-ಡೀಸೆಲ್ ಮಾರಾಟಕ್ಕೆ ಇದ್ದ ಎಲ್ಲಾ ನಿರ್ಬಂಧ ರದ್ದು: ಕೇಂದ್ರ ಸರ್ಕಾರದ ಆದೇಶ

ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿದ್ದ ಎಲ್ಲಾ ನಿರ್ಬಂಧಗಳನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದು, ಜುಲೈ 1ರಿಂದ ಇಂಧನ ಮಾರಾಟವು ಎಂದಿನಂತೆ ಯಾವುದೇ ನಿರ್ಬಂಧವಿಲ್ಲದೆ ನಡೆಯಲಿದೆ. ಈ ಕುರಿತು ಕೇಂದ್ರ ಸರ್ಕಾರ ಭಾನುವಾರ ಆದೇಶ ಹೊರಡಿಸಿದ್ದು, ಪ್ರತಿ ವ್ಯಕ್ತಿಗೆ ಗರಿಷ್ಠ 200 ಲೀಟರ್ ಡೀಸೆಲ್ ಮಾತ್ರ ಮಾರಾಟ ಮಾಡಬೇಕೆಂಬ ನಿಯಮ ಸೇರಿದಂತೆ ಜೂನ್ 11ರಂದು ಜಾರಿಗೊಳಿಸಿದ್ದ ಎಲ್ಲಾ ನಿರ್ಬಂಧಗಳು ಜುಲೈ 1ರಿಂದ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ದೇಶದ ಇಂಧನ ಪೂರೈಕೆ ಮತ್ತು ವಿತರಣಾ ವ್ಯವಸ್ಥೆಯ ಸ್ಥಿತಿಗತಿಗಳನ್ನು […]

1947 ರಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಎಷ್ಟಿತ್ತು ಗೊತ್ತಾ? ಕೇಳಿದರೆ ಅಚ್ಚರಿ ಆಗೋದು ಖಂಡಿತಾ!

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನೇದಿನೇ ಏರಿಕೆಯಾಗುತ್ತಿವೆ. ಜಾಗತಿಕ ತೈಲ ಕೊರತೆ, ಮಧ್ಯಪ್ರಾಚ್ಯದ ಉದ್ವಿಗ್ನತೆ, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಸೇರಿದಂತೆ ಹಲವು ಕಾರಣಗಳಿಂದ ಇಂಧನ ದರಗಳು ಜನರ ಮೇಲೆ ಹೆಚ್ಚುವರಿ ಹೊರೆ ತಂದಿವೆ. ಇಂತಹ ಸಂದರ್ಭದಲ್ಲೇ ಒಂದು ಕುತೂಹಲಕಾರಿ ಪ್ರಶ್ನೆ ಹಲವರ ಮನದಲ್ಲಿ ಮೂಡುತ್ತದೆ — ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಾಗ ಪೆಟ್ರೋಲ್ ಬೆಲೆ ಎಷ್ಟಿತ್ತು? 1947ರಲ್ಲಿ ಪೆಟ್ರೋಲ್ ದರ ಎಷ್ಟು? ಭಾರತ ಸ್ವತಂತ್ರವಾದ ಸಮಯದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಕೇವಲ […]

ಬರಿದಾಗುತ್ತಿದೆ ಅಂತರ್ಜಲ: ಕರಾವಳಿಗರಿಗೆ “ಹಾಟ್” ನ್ಯೂಸ್! ಮುಂದಿದೆ ಸಂಕಷ್ಟ?

ದಕ್ಷಿಣ ಕನ್ನಡದಲ್ಲಿ ಬಿಸಿಲಿನ ತೀವ್ರತೆ: ಅಂತರ್ಜಲ ಮಟ್ಟ ಕುಸಿತ, ಕುಡಿಯುವ ನೀರಿಗೆ ಆತಂಕ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಈ ಬಾರಿ ಪರಿಸ್ಥಿತಿ ತೀವ್ರವಾಗಿ ಬದಲಾಗಿದೆ. 35–36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದು, ಬಿಸಿಲಿನ ತೀವ್ರತೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕುಸಿಯುತ್ತಿದೆ ಅಂತರ್ಜಲ, ಬರಿದಾಗುತ್ತಿವೆ ಬಾವಿಗಳು ಜಿಲ್ಲೆಯ ಹಲವು ಭಾಗಗಳಲ್ಲಿ, ವಿಶೇಷವಾಗಿ ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಪ್ರದೇಶಗಳಲ್ಲಿ, ಅಂತರ್ಜಲ ಮಟ್ಟ ಗಣನೀಯವಾಗಿ ಕುಸಿದಿದೆ. ಎಂದಿಗೂ ನೀರಿನಿಂದ […]

ಕಾಂಗ್ರೆಸ್ ನ ಕಾಮಾಲೆ ಕಣ್ಣಿಗೆ ಜಗವೆಲ್ಲಾ ಹಳದಿ: ಕಿದಿಯೂರು ಉದಯಕುಮಾರ್ ಶೆಟ್ಟಿ

ಉಡುಪಿ: ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರದ ಜಾಹೀರಾತುಗಳಲ್ಲಿ ಬಿಜೆಪಿ ಕರ್ನಾಟಕದ ಜನತೆಗೆ ಚೆಂಬು ನೀಡಿದೆ ಎಂದು ಪ್ರಚಾರ ಮಾಡುತ್ತಿರುವುದು, ಕಾಮಾಲೆ ಕಣ್ಣಿನವರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯಕುಮಾರ್ ಶೆಟ್ಟಿ ವ್ಯಂಗ್ಯ ಮಾಡಿದ್ದಾರೆ. ಅವರು ಉಡುಪಿ ವಿಧಾನಸಭಾ ಕ್ಷೇತ್ರದ ದೊಡ್ಡಣಗುಡ್ಡೆಯ ಮಣೋಲಿಗುಜ್ಜಿಯಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ಬಂದು ನಾಲ್ಕು ತಲೆಮಾರುಗಳ ಆಡಳಿತ ನಡೆಸಿದ ಕಾಂಗ್ರೆಸ್ ಗೆ ಕನಿಷ್ಠ ಶೌಚಾಲಯ ನಿರ್ಮಾಣ ಮಾಡಲು ಸಾಧ್ಯವಾಗದೇ ಜನರ ಕೈಗೆ […]

ಪರಶುರಾಮ ಪ್ರತಿಮೆ ವಿಚಾರದಲ್ಲಿ ಅಪಪ್ರಚಾರ ಮಾಡುವ ಬದಲು ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸಲಿ: ಕುಯಿಲಾಡಿ ಸುರೇಶ್ ನಾಯಕ್ ಸವಾಲು

ಉಡುಪಿ: ಪರಶುರಾಮನ ಪ್ರತಿಮೆ ವಿಚಾರದಲ್ಲಿ ಆಧಾರ ರಹಿತ ಅಪಪ್ರಚಾರ ಮಾಡುತ್ತಿರುವ ಕಾಂಗ್ರೆಸ್ಸಿಗೆ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿಸಲು ಯಾಕೆ ಮನಸ್ಸು ಮಾಡುತ್ತಿಲ್ಲ. ಜನತೆಯ ಗಮನವನ್ನು ಬೇರೆಡೆಗೆ ಕೇಂದ್ರೀಕರಿಸಲು ಕಾಂಗ್ರೆಸಿಗರು ಹಾದಿ ಬೀದಿಗಳಲ್ಲಿ ಬೊಬ್ಬೆ ಹೊಡೆಯುವ ಬದಲು ಅಗತ್ಯ ವಿಚಾರಗಳ ಬಗ್ಗೆ ಸೂಕ್ತ ತನಿಖೆ ನಡೆಸಲು ಒತ್ತು ನೀಡುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಸರಕಾರ ಆಡಳಿತ ನಡೆಸುತ್ತಿದೆ. ತನಿಖಾ ಸಂಸ್ಥೆಗಳು, ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳು […]