ಪಕ್ಷದ ಘನತೆಗೆ ಧಕ್ಕೆ ತರಬೇಡಿ :ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು ಸೂಕ್ತ ಸಮಯದಲ್ಲಿ ಸಮರ್ಥ ನಿರ್ಧಾರವನ್ನು ಪ್ರಕಟಿಸಲಿದೆ.ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸೂಚಿಸಿದ್ದಾರೆ. ಪಕ್ಷದ ಆಂತರಿಕ ವಿಷಯಗಳನ್ನು ಮಾಧ್ಯಮಗಳ ಮುಂದೆ ಚರ್ಚಿಸುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ. […]