ಬಿಜೆಪಿ ಸ್ಥಾಪನಾ ದಿನಾಚರಣೆ, ಅಂಬೇಡ್ಕರ್ ಜಯಂತಿ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಎ.6 ರಂದು ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಪಕ್ಷದ ಧ್ವಜಾರೋಹಣಗೈದು ಬಿಜೆಪಿಯ ಹುಟ್ಟು ಮತ್ತು ಬೆಳವಣಿಗೆಯ ಬಗ್ಗೆ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಬೇಕು ಹಾಗೂ ಎ.14 ರಂದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆಯನ್ನು ಸೇವಾ ಕಾರ್ಯಗಳ ಮೂಲಕ ಯಶಸ್ವಿಗೊಳಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ […]