ಎಪ್ರಿಲ್ 8 ಅಥವಾ 9 ರಂದು ಬಿಜೆಪಿ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ: ಬೊಮ್ಮಾಯಿ

ಬೆಂಗಳೂರು: ಕಳೆದೆರೆಡು ದಿನಗಳಿಂದ ಜಿಲ್ಲಾ ಸಮಿತಿಗಳಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಇಂದು ರಾಜ್ಯ ಕೋರ್ ಕಮಿಟಿ ಪರಿಶೀಲಿಸಿ, ಕೇಂದ್ರಕ್ಕೆ ಕಳುಹಿಸಿಕೊಡಲಿದೆ. ಬಹುತೇಕ ಎಪ್ರಿಲ್ 8 ಅಥವಾ 9 ರಂದು ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಿದ್ದು, ಸ್ಪಷ್ಟ ಬಹುಮತದ ಸರ್ಕಾರ ರಚನೆಯಾಗುವ ವಿಶ್ವಾಸವಿದ್ದು, ಕೆಲವು ಕಡೆ ಅಚ್ಚರಿ ರೀತಿಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಟಿಕೆಟ್‌ ಪ್ರಕ್ರಿಯೆ ಅಂತಿಮಗೊಳಿಸಲು ಮಂಗಳವಾರ ಹಾಗೂ ಬುಧವಾರದಂದು ರಾಜ್ಯ […]