ಮಧ್ಯಪ್ರದೇಶದಲ್ಲಿ ಕ್ಷೀಪ್ರ ರಾಜಕೀಯ ಬೆಳವಣಿಗೆ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ
ನವದೆಹಲಿ: ಮಧ್ಯಪ್ರದೇಶದ ಪ್ರಭಾವಿ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಇಂದು ಬಿಜೆಪಿ ಸೇರಿದ್ದಾರೆ. ಮಧ್ಯಪ್ರದೇಶದಲ್ಲಿ ನಡೆದ ಕ್ಷೀಪ್ರ ರಾಜಕೀಯ ಬೆಳವಣಿಗೆಯಿಂದಾಗಿ ಕಮಲ್ ನಾಥ್ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದು, ಅಧಿಕಾರ ಕಳೆದುಕೊಳ್ಳುವ ಆತಂಕದಲ್ಲಿದೆ. ಈ ನಡುವೆ ಸಿಂಧಿಯಾ ಬಿಜೆಪಿ ಸೇರ್ಪಡೆ ಕಾಂಗ್ರೆಸ್ ಗೆ ದೊಡ್ಡ ಹೊಡೆತ ನೀಡಿದೆ. ಸಿಂಧಿಯಾ ಬೆಂಬಲಿಗರೆಂದು ಎನ್ನಲಾದ 22 ಮಂದಿ ಶಾಸಕರು ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸರ್ಕಾರ ಪತನದ ಅಂಚಿಗೆ ತಲುಪಿದೆ. ಶಾಸಕರ ಮನವೊಲಿಕೆ ಕಾರ್ಯ […]