ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮ
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಬುಧವಾರ ಮಣಿಪಾಲ ವಾರ್ಡಿನಲ್ಲಿಅರಶಿನ ಕುಂಕುಮ ಕಾರ್ಯಕ್ರಮ ನಡೆಯಿತು. ಶಿಲ್ಪಾ ಆರ್ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗ ಉದ್ಘಾಟನೆ
ಮಣಿಪಾಲ: ನ.14ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವನ್ನು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕ ಕೆ.ರಘುಪತಿ ಭಟ್ ರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. […]
ಶಿವಪಾಡಿ: ನವೆಂಬರ್ 14-15 ರಂದು ಬಿಜೆಪಿ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ
ಶಿವಪಾಡಿ : ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಎರಡು ದಿನಗಳ ಪ್ರಶಿಕ್ಷಣ ವರ್ಗವು ನವೆಂಬರ್ 14 ಮತ್ತು15 ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಜರಗಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ನವೆಂಬರ್ 14 ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ […]