ಉಡುಪಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಜಿಲ್ಲಾಧ್ಯಕ್ಷರ ಪದಗ್ರಹಣಕ್ಕೆ ಇಬ್ಬರು ಶಾಸಕರು ಗೈರು
ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಇಂದು ನಗರದ ಕಿದಿಯೂರು ಹೋಟೆಲ್ ನಲ್ಲಿ ನಡೆದ ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಪದಗ್ರಹಣ ಸಮಾರಂಭಕ್ಕೆ ಜಿಲ್ಲೆಯ ಐವರು ಶಾಸಕರ ಪೈಕಿ ಇಬ್ಬರು ಶಾಸಕರು ಗೈರಾಗುವ ಮೂಲಕ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸಮಾರಂಭಕ್ಕೆ ಗೈರಾಗಿದ್ದು, ಆ ಮೂಲಕ ತಮ್ಮೊಳಗೆ ಕುದಿಯುತ್ತಿದ್ದ ಅಸಮಾಧಾನದ ಜ್ವಾಲೆಯನ್ನು ಹೊರಹಾಕಿದ್ದಾರೆ. […]