ಮರಳುಗಾರಿಕೆಗೆ ಪರವಾನಿಗೆ ನೀಡಿಕೆ : ಜಿಲ್ಲಾ ಬಿಜೆಪಿ ಸ್ವಾಗತ’
ಉಡುಪಿ:ಮರಳು ದಿಬ್ಬಗಳನ್ನು ತೆರವುಗೊಳಿಸಲು ರಾಜ್ಯ ಕರಾವಳಿ ವಲಯ ನಿರ್ವಹಣ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ದೊರೆತಿರುವುದು ಸ್ವಾಗತಾರ್ಹ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಈ ಪ್ರಕಿಯೆಯು ಹಲವಾರು ಎಡರು ತೊಡರುಗಳಿಂದ ಜಿಲ್ಲೆಯಾದ್ಯಂತ ಸ್ಥಗಿತಗೊಂಡಿದ್ದ ಮರಳುಗಾರಿಕೆ ಪುನಶ್ಚೇತನಕ್ಕೆ ವೇಗ ನೀಡಲಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಏಳು ಸದಸ್ಯರ ಸಮಿತಿ ಸಭೆಯಲ್ಲಿ ಸಾಂಪ್ರದಾಯಿಕ ಮರಳು ಪರವಾನಿಗೆದಾರರಿಗೆ ಮರಳು ದಿಬ್ಬಗಳನ್ನು ತೆರವುಗೊಳಿಸುವರೆ ತಾತ್ಕಾಲಿಕ ಪರವಾನಿಗೆ ನೀಡಲು ತೀರ್ಮಾನ ಕೈಗೊಂಡಿರುವುದು ಉತ್ತಮ ಬೆಳವಣಿಗೆ. ಇದರ ಫಲವಾಗಿ ಸಾರ್ವಜನಿಕರಿಗೆ ಶೀಘ್ರವಾಗಿ ಮರಳು ಲಭ್ಯವಾಗುವ ಸಾಧ್ಯತೆಗಳಿದ್ದು, […]