ವಾಶ್ ರೂಮಿನಲ್ಲಿ ವೀಡಿಯೋ ಪ್ರಕರಣ: ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನಾ ಮೆರವಣಿಗೆ

ಉಡುಪಿ: ಖಾಸಗಿ ಕಾಲೇಜಿನ ವಾಶ್ ರೂಮಿನಲ್ಲಿ ರಹಸ್ಯ ಕ್ಯಾಮರಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷವು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು. ಶಂಕಿತರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ ಪ್ರತಿಭಟನಾಕಾರರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ. ಸೂಕ್ತ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದರು. ಶುಕ್ರವಾರದಂದು ಬೆಳಿಗ್ಗೆ ಬಿಜೆಪಿ ಕಚೇರಿಯಿಂದ ಎಸ್‌ಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದ ಪ್ರತಿಭಟನಾ ನಿರತರು ನ್ಯಾಯಕ್ಕಾಗಿ ಒತ್ತಾಯಿಸಿದರು. ಪಕ್ಷದ ಶಾಸಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. […]

ರಾಜ್ಯ ಸರಕಾರದ ಸಂವಿಧಾನ ವಿರೋಧಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ

ಉಡುಪಿ: ಜನತೆಗೆ ಆಮಿಷವನ್ನು ಒಡ್ಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಗ್ಯಾರಂಟಿಗಳನ್ನು ಮರೆತು ಜನರ ಗಮನವನ್ನು ಬೇರೆಡೆಗೆ ಒಯ್ಯಲು ವಿವಿಧ ಜನ ವಿರೋಧಿ, ಸಂವಿಧಾನ ವಿರೋಧಿ ಕಾರ್ಯಗಳಲ್ಲಿ ತೊಡಗಿದೆ. ಇದರ ಭಾಗವಾಗಿ ವಿಧಾನಸಭೆಯಲ್ಲಿ ಉಪ ಸಭಾಪತಿಯವರ ಎದುರು ಪೇಪರ್ ಹರಿದು ಎಸೆದ ಕಾರಣಕ್ಕೆ ಸ್ಪೀಕರ್ ರವರು ಸರ್ವಾಧಿಕಾರಿ ಧೋರಣೆ ತಳೆದು ಬಿಜೆಪಿಯ 10 ಮಂದಿ ಶಾಸಕರನ್ನು ಅಸಾಂವಿಧಾನಿಕ ರೀತಿಯಲ್ಲಿ ಸದನದಿಂದ ಅಮಾನತುಗೊಳಿಸಿರುವುದು ಆತುರದ ನಿರ್ಧಾರದ ಅತ್ಯಂತ ಹೇಯ ಕೃತ್ಯವಾಗಿದೆ. ಈ ವಿಚಾರದಲ್ಲೂ ದಲಿತ ಕಾರ್ಡ್ ಬಳಕೆ ಮಾಡುತ್ತಿರುವ ಕಾಂಗ್ರೆಸ್ […]