ಶೋಭಾ ಕರಂದ್ಲಾಜೆ ಪರ ಕುಂದಾಪುರದಲ್ಲಿ ಕೋಟ, ಹಾಲಾಡಿ ರೋಡ್ ಶೋ
ಕುಂದಾಪುರ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಮತಯಾಚನೆ ನಡೆಸುವ ಸಲುವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ರೋಡ್ ಶೋ ಗೆ ಚಾಲನೆ ನೀಡಿದರು. ಕುಂದಾಪುರದ ಹೃದಯಭಾಗವಾದ ಶಾಸ್ತ್ರೀ ವೃತ್ತದಿಂದ ಆರಂಭಗೊಂಡ ಪಾದಯಾತ್ರೆ ಹೊಸ ಬಸ್ ನಿಲ್ದಾಣದ ಮಾರ್ಗವಾಗಿ ಮತ್ತೆ ಶಾಸ್ತ್ರೀ ವೃತ್ತದಲ್ಲಿ ಸಮಾಪನಗೊಂಡಿತು. ಪಾದಯಾತ್ರೆಗೆ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪೋದಿ ಪರ ಘೋಷಣೆಗಳನ್ನು ಕೂಗಿ ಜೈಕಾರ ಹಾಕಿದರು. […]