ಉಡುಪಿ ಜಿಲ್ಲೆಯಲ್ಲಿ ಅಬ್ಬರಿಸಿದ ಬಿಜೆಪಿ: ಐದು ಕ್ಷೇತ್ರದಲ್ಲಿ ಅರಳಿದ ಕಮಲ..
ಉಡುಪಿ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ- 2023 ಕ್ಕೆ ಸಂಬಂಧಿಸಿದಂತೆ ಇಂದು ನಡೆದ ಮತ ಎಣಿಕೆಯಲ್ಲಿ ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿ.ಜೆ.ಪಿ ಪಕ್ಷವು ಗೆಲುವು ಸಾಧಿಸಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು 98,628 ಮತಗಳನ್ನು ಪಡೆದು, ತಮ್ಮ ಸಮೀಪದ ಪ್ರತಿಸ್ಪರ್ಧಿಗಿಂತ 16,153 ಮತಗಳ ಅಂತರದಿAದ ಜಯಗಳಿಸಿರುತ್ತಾರೆ. ಗೋಪಾಲ ಪೂಜಾರಿ ಅವರು 82,475 ಮತಗಳನ್ನು ಪಡೆದಿರುತ್ತಾರೆ. ಉಳಿದಂತೆ ಜೆ.ಡಿ.ಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ 841, ಆಮ್ ಆದ್ಮಿ ಪಕ್ಷದ […]