ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು; ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ  ಸಂಭ್ರಮಾಚರಣೆ ನಡೆಸಲಾಯಿತು.ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಿ ಸಂಭ್ರಮಿಸಲಾಯಿತು.