ಬಿಜೆಪಿ ಮೊದಲ‌ ಪಟ್ಟಿ ರಿಲೀಸ್: ಉಡುಪಿಗೆ ಯಶ್ ಪಾಲ್, ಕಾಪುಗೆ ಸುರೇಶ್ ಶೆಟ್ಟಿ ಗುರ್ಮೆ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿ ಬಿಡುಗಡೆಗೂ ಮುನ್ನ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಸುಮಾರು 25 ಸಾವಿರ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ಹೇಳಿದರು. […]