‘ಗೋವಿಗಾಗಿ ಮೇವು’ ಅಭಿಯಾನದ ಸಂಘಟಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಆಯ್ಕೆ

ಕೋಟ: ಭಾರತೀಯ ಜನತಾ ಪಕ್ಷದ ಉಡುಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿ ಜೀವನದಿಂದಲೇ ವಿದ್ಯಾರ್ಥಿ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಇವರು ಹಲವಾರು ಯಶಸ್ವಿ ವಿದ್ಯಾರ್ಥಿ ಹೋರಾಟಗಳನ್ನು ಸಂಘಟಿಸಿ, ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಅನಂತರ ರಾಜಕೀಯ ಪ್ರವೇಶಿಸಿ ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ‘ಗೋವಿಗಾಗಿ ಮೇವು’ ಎನ್ನುವ ಯಶಸ್ವಿ ಅಭಿಯಾನವನ್ನು ಸಂಘಟಿಸಿ, ಗೋ ಶಾಲೆಗಳಿಗೆ ವಿವಿಧ ಸಂಘಟನೆಗಳಿಂದ ಮೇವು ಒದಗಿಸುವುದರ ಮೂಲಕ ರಾಜ್ಯ […]

ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ‘2024 ಮೋದಿ ಮತ್ತೊಮ್ಮೆ’ ಗೋಡೆ ಬರಹ ಬರೆದ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ಶನಿವಾರದಂದು ಕಾಪು ಮಂಡಲ ಬಿಜೆಪಿ ಕಚೇರಿ ಬಳಿ ಆಯೋಜಿಸಲಾದ “2024 ಮೋದಿ ಮತ್ತೊಮ್ಮೆ” ಗೋಡೆ ಬರಹಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು. ಬಳಿಕ ಮಾತನಾಡಿ ಜಗತ್ತು ಕಂಡ ಶ್ರೇಷ್ಠ ನಾಯಕ ನರೇಂದ್ರ ಮೋದಿ. ಭಾರತವನ್ನು ವಿಶ್ವಗುರುವನ್ನಾಗಿಸಲು ಹೊರಟ ನಾಯಕನನ್ನು ಮತ್ತೊಮ್ಮೆ ಪ್ರಧಾನಿಯಾಗಿ ನೋಡಲು ಇಡೀ ವಿಶ್ವವೇ ಕಾಯುತ್ತಿದೆ ಎಂದರು. ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕಾಪು ಮಂಡಲ ಯುವಮೋರ್ಚಾ […]

ಜೂನ್ 30ರೊಳಗೆ ಶರಣಾಗಿ; ಇಲ್ಲದಿದ್ದರೆ ಮನೆ ಜಪ್ತಿಗೆ ತಯಾರಾಗಿ: ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳಿಗೆ ಎನ್.ಐ.ಎ ವಾರ್ನಿಂಗ್

ಸುಳ್ಯ: ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳು ಸ್ವಯಂ ಪ್ರೇರಿತವಾಗಿ ಜೂನ್‌.30ರೊಳಗೆ ಹಾಜರಾಗಬೇಕು ಎಂದು ಎನ್‌ಐಎ ಕೋರ್ಟ್‌ ಆದೇಶ ಹೊರಡಿಸಿದೆ. ಒಂದು ವೇಳೆ ಜೂನ್‌.30ರೊಳಗೆ ಶರಣಾಗದಿದ್ದಲ್ಲಿ ಆರೋಪಿಗಳ ಆಸ್ತಿಯನ್ನು ಜಪ್ತಿ ಮಾಡಲಾಗುವುದು ಎಂದು ಎನ್‌ಐಎ ಕೋರ್ಟ್‌ ಹೇಳಿದೆ. ಈ ಬಗ್ಗೆ ಸುಳ್ಯದಲ್ಲಿ ಧ್ವನಿವರ್ಧಕದ ಮೂಲಕ ಸಂದೇಶ ನೀಡಲಾಗಿದೆ. ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಮಾಡಿದ ಆರೋಪಿಗಳ ಸುಳಿವು ಕೊಟ್ಟವರಿಗೆ ನಗದು ಬಹುಮಾನ ನೀಡುವುದಾಗಿಯೂ ಘೋಷಿಸಲಾಗಿದೆ. 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ […]

ಕಾರ್ಕಳ: ಪೂರ್ಣಿಮಾ ಸಿಲ್ಕ್ಸ್ ಗೆ ಭೇಟಿ ನೀಡಿದ ಅಣ್ಣಾಮಲೈ

ಕಾರ್ಕಳ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಕಳ ವತಿಯಿಂದ ಐತಿಹಾಸಿಕ ಬೈಕ್‌ ರ‍್ಯಾಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಐಪಿಎಸ್‌ ಅಧಿಕಾರಿ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಷಾಮಲೈ ಕೆ., ಕಾರ್ಕಳ ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ಗೆ ಭೇಟಿ‌ ನೀಡಿದರು. ಸಂಸ್ಥೆಯ ಮಾಲಕ ರವಿಪ್ರಕಾಶ್ ಪ್ರಭು ಅಣ್ಣಾಮಲೈ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಸಂಸ್ಥೆಯ ಪಾಲುದಾರೆ ಶ್ರೀಮತಿ ಕಿರಣ ರವಿಪ್ರಕಾಶ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ನಾಯಕ್ ಉಪಸ್ಥಿತರಿದ್ದರು.

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ 14 ಕ್ಕೆ ಏರಿಕೆ

ಮಂಗಳೂರು: ಜುಲೈ 26 ರಂದು ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯು ಶನಿವಾರದಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ ಎಂದು ವರದಿಯಾಗಿದೆ. ಸುಳ್ಯ ನಿವಾಸಿ ಶಾಹಿದ್‌ ಬೆಳ್ಳಾರೆ ಬಂಧಿತ ಆರೋಪಿ ಎನ್ನಲಾಗಿದೆ. ಸುಳ್ಯದ ಶಾಹಿದ್ ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಮತ್ತು ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆಯ ಸಂಬಂಧಿಕನಾಗಿದ್ದಾನೆ ಎನ್ನಲಾಗಿದೆ. […]