ಶಾಸಕ ಹರೀಶ್ ಪೂಂಜಾ ಮೇಲೆ ದಾಳಿ ಯತ್ನ: ಬಿಜೆಪಿ ಯುವ ಮೋರ್ಚಾ, ಹಿಂದೂ ಸಂಘಟನೆಗಳಿಂದ ಖಂಡನೆ
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ದಾಳಿಗೆ ಯತ್ನ ನಡೆಸಿದ ಘಟನೆ ಶುಕ್ರವಾರ ಅ.13ರಂದು ರಾತ್ರಿ 11.15 ರ ಸುಮಾರಿಗೆ ನಡೆದಿದೆ. ಹರೀಶ್ ಪೂಂಜಾ ಅವರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಶಾಸಕರಿದ್ದ ಕಾರನ್ನು ಅಡ್ಡಗಟ್ಟಿ ದಾಳಿಗೆ ಯತ್ನಿಸಿದೆ. ಆದರೆ ಅದೃಷ್ಟವಶಾತ್ ಶಾಸಕರು ಈ ಕಾರಿನಲ್ಲಿರದೆ, ತಮ್ಮ ಸಂಬಂಧಿಯೊಬ್ಬರ ಕಾರಿನಲ್ಲಿ ಮುಂದಿನಿಂದ ಪ್ರಯಾಣಿಸುತ್ತಿದ್ದರು. ಶಾಸಕರ ಕಾರು ಹಿಂದಿನಿಂದ ಪ್ರಯಾಣಿಸುತ್ತಿತ್ತು. ಈ ಬಗ್ಗೆ […]
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂರು ಪ್ರಮುಖ ಆರೋಪಿಗಳ ಬಂಧನ; ಒಟ್ಟು ಬಂಧಿತರ ಸಂಖ್ಯೆ ಹತ್ತಕ್ಕೆ ಏರಿಕೆ
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯು ಒಂದು ಪೂರ್ವ ನಿಯೋಜಿತ ಷಡ್ಯಂತ್ರದ ಭಾಗವೆಂದು ಮುಖ್ಯಮಂತ್ರಿ ಬೊಮ್ಮಾಯಿ ಉಲ್ಲೇಖಿಸುತ್ತಲೇ ಬಂದಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ನಡೆದು ಎರಡು ವಾರಗಳು ಕಳೆದಿದ್ದು, ದಿನಗಳ ಅಂತರದಲ್ಲಿ ಬಂಧನಗಳು ನಡೆಯುತ್ತಲೇ ಇವೆ. ಇದೀಗ ಪ್ರವೀಣ್ ಹತ್ಯೆಗೆ ಸಂಬಂಧಿಸಿ ಸುಳ್ಯದ ಮೂವರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಶಿಯಾಬುದ್ದೀನ್ ಅಲಿ, ರಿಯಾಜ್ ಹಾಗೂ ಎಲಿಮಲೆಯ ಬಶೀರ್ ಬಂಧಿತರು ಎಂದು ವರದಿಯಾಗಿದೆ. ಈ ಕುರಿತು ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ […]
ಬೆಳ್ಳಾರೆ ಉದ್ವಿಗ್ನ: ನಳಿನ್ ಕುಮಾರ್ ಕಟೀಲ್ ಕಾರಿಗೆ ಮುತ್ತಿಗೆ; ಸಾರ್ವಜನಿಕರಿಂದ ಕಲ್ಲು ತೂರಾಟ, ಪೊಲೀಸರಿಂದ ಲಾಠಿ ಚಾರ್ಜ್
ಸುಳ್ಯ: ನಿನ್ನೆ ತಡರಾತ್ರಿ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರೆ ಅವರ ಬರ್ಬರ ಹತ್ಯೆ ನಡೆದಿದ್ದು ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಶಿಕ್ಷಿಸುವ ಭರವಸೆ ನೀಡಿದ್ದರೂ ಸಾರ್ವಜನಿಕರ ಆಕ್ರೋಶ ಮಾತ್ರ ತಣ್ಣಗಾಗಿಲ್ಲ. ಘಟನೆಯ ಬಳಿಕ ಸುದ್ದಿ ತಿಳಿದ ಸಂಸದ, ಸಚಿವರು, ಶಾಸಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಸಂದರ್ಭ ಜನತೆಯ ಮಡುಗಟ್ಟಿದ ಆಕ್ರೋಶ ಕಾರಿಗೆ ಮುತ್ತಿಗೆ ಹಾಕುವ ರೂಪದಲ್ಲಿ ವ್ಯಕ್ತವಾಗಿದೆ. ಸಂಸದ ನಳಿನ್ ಕುಮಾರ್, ಸಚಿವ ಸುನಿಲ್ ಕುಮಾರ್ ಮತ್ತು ಸ್ಥಳೀಯ ಶಾಸಕರ ಕಾರಿಗೆ ಮುತ್ತಿಗೆ […]
ಬಿಜೆಪಿ ಯುವ ಮೋರ್ಚಾ ಮುಖಂಡನ ಹತ್ಯೆ: ಪುತ್ತೂರಿನಲ್ಲಿ ಸೆಕ್ಷನ್ 144 ಜಾರಿ
ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ಎಂಬ ಯುವಕನ ಹತ್ಯೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು (32) ಕೊಲೆಯಾದ ದುರ್ದೈವಿ. ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದರು. ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿಯನ್ನು ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ […]