ಕಾಂಗ್ರೆಸ್ ನ ಕಾಮಾಲೆ ಕಣ್ಣಿಗೆ ಜಗವೆಲ್ಲಾ ಹಳದಿ: ಕಿದಿಯೂರು ಉದಯಕುಮಾರ್ ಶೆಟ್ಟಿ
ಉಡುಪಿ: ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರದ ಜಾಹೀರಾತುಗಳಲ್ಲಿ ಬಿಜೆಪಿ ಕರ್ನಾಟಕದ ಜನತೆಗೆ ಚೆಂಬು ನೀಡಿದೆ ಎಂದು ಪ್ರಚಾರ ಮಾಡುತ್ತಿರುವುದು, ಕಾಮಾಲೆ ಕಣ್ಣಿನವರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯಕುಮಾರ್ ಶೆಟ್ಟಿ ವ್ಯಂಗ್ಯ ಮಾಡಿದ್ದಾರೆ. ಅವರು ಉಡುಪಿ ವಿಧಾನಸಭಾ ಕ್ಷೇತ್ರದ ದೊಡ್ಡಣಗುಡ್ಡೆಯ ಮಣೋಲಿಗುಜ್ಜಿಯಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ಬಂದು ನಾಲ್ಕು ತಲೆಮಾರುಗಳ ಆಡಳಿತ ನಡೆಸಿದ ಕಾಂಗ್ರೆಸ್ ಗೆ ಕನಿಷ್ಠ ಶೌಚಾಲಯ ನಿರ್ಮಾಣ ಮಾಡಲು ಸಾಧ್ಯವಾಗದೇ ಜನರ ಕೈಗೆ […]
ಪರಶುರಾಮ ಪ್ರತಿಮೆ ವಿಚಾರದಲ್ಲಿ ಅಪಪ್ರಚಾರ ಮಾಡುವ ಬದಲು ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸಲಿ: ಕುಯಿಲಾಡಿ ಸುರೇಶ್ ನಾಯಕ್ ಸವಾಲು
ಉಡುಪಿ: ಪರಶುರಾಮನ ಪ್ರತಿಮೆ ವಿಚಾರದಲ್ಲಿ ಆಧಾರ ರಹಿತ ಅಪಪ್ರಚಾರ ಮಾಡುತ್ತಿರುವ ಕಾಂಗ್ರೆಸ್ಸಿಗೆ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿಸಲು ಯಾಕೆ ಮನಸ್ಸು ಮಾಡುತ್ತಿಲ್ಲ. ಜನತೆಯ ಗಮನವನ್ನು ಬೇರೆಡೆಗೆ ಕೇಂದ್ರೀಕರಿಸಲು ಕಾಂಗ್ರೆಸಿಗರು ಹಾದಿ ಬೀದಿಗಳಲ್ಲಿ ಬೊಬ್ಬೆ ಹೊಡೆಯುವ ಬದಲು ಅಗತ್ಯ ವಿಚಾರಗಳ ಬಗ್ಗೆ ಸೂಕ್ತ ತನಿಖೆ ನಡೆಸಲು ಒತ್ತು ನೀಡುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಸರಕಾರ ಆಡಳಿತ ನಡೆಸುತ್ತಿದೆ. ತನಿಖಾ ಸಂಸ್ಥೆಗಳು, ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳು […]
ಇಸ್ರೇಲ್ ನಲ್ಲಿರುವ ಕುಟುಂಬ ಸದಸ್ಯರ ಮಾಹಿತಿಗಾಗಿ ಸಹಾಯವಾಣಿ ಸಂಪರ್ಕಿಸಿ: ಯಶ್ ಪಾಲ್ ಸುವರ್ಣ
ಉಡುಪಿ: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಉಡುಪಿ ಜಿಲ್ಲೆಯವರ ರಕ್ಷಣೆಗಾಗಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಇಸ್ರೇಲ್‌ನಲ್ಲಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ಕುಟುಂಬಿಕರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆಮಾಡಿ ಅಥವಾ ವಾಟ್ಸ್ಯಾಪ್ ಸಂಖ್ಯೆಗೆ ಸಂದೇಶ ಕಳುಹಿಸಿ ಅಗತ್ಯ ನೆರವು ಪಡೆಯಬಹುದು ಎಂದು ಯಶಪಾಲ್ ಸುವರ್ಣ ತಿಳಿಸಿದ್ದಾರೆ. ಮೊಬೈಲ್ – +919964023344, +919110882491 ವಾಟ್ಸ್ಯಾಪ್ – +919740217378 ಇಮೈಲ್ ಐಡಿ: [email protected]
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು: ಕಳೆದ ವರ್ಷ ಭಾರತೀಯ ಜನತಾ ಪಕ್ಷದ(BJP) ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಎಚ್‌ಬಿ ಪ್ರಭಾಕರ ಶಾಸ್ತ್ರಿ ಮತ್ತು ಅನಿಲ್ ಬಿ ಕತ್ತಿ ಅವರ ಪೀಠವು ಆರೋಪಿಗಳು ಅಪರಾಧದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ತೋರಿಸಲು ಸಾಕಷ್ಟು ದೋಷಾರೋಪಣೆಯ ಸಾಕ್ಷ್ಯವನ್ನು ಕಂಡುಹಿಡಿದಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸದಸ್ಯರಾಗಿರುವ ಮೂವರು ಆರೋಪಿಗಳಾದ ಇಸ್ಮಾಯಿಲ್ ಶಫಿ ಕೆ, ಕೆ ಮಹಮ್ಮದ್ ಇಕ್ಬಾಲ್ ಮತ್ತು ಶಹೀದ್ ಎಂ […]
ಕಾಪು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಉಚ್ಛಾಟನೆ
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದುಕೊಂಡು ಪಕ್ಷದ ನಿಲುವನ್ನು ವಿರೋಧಿಸಿ ಬಿಜೆಪಿಯ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವರ ಸೋಲಿಗೆ ಕಾರಣರಾಗಿರುವ ಮಾಲತಿ ಮತ್ತು ಅವರಿಗೆ ಬೆಂಬಲಿಸಿರುವ ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಸುವರ್ಣ ಹಾಗೂ ಫ್ರೀಡಾ ಡಿ’ಸೋಜಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಾಗಿ ಕಾಪು ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೂಚನೆಯಂತೆ 6 ವರ್ಷಗಳ ಕಾಲ […]