ಕಾಪು: ರಕ್ಷಿತ್ ಕೋಟ್ಯಾನ್ ಹಲ್ಲೆ ಪ್ರಕರಣ; ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ

ಕಾಪು: ಇತ್ತೀಚೆಗೆ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಮೇಲೆ ಅಪರಿಚಿತರಾದ ಮೂವರು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ಬಗ್ಗೆ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿದಾಗ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳನ್ನು ಹೊತ್ತು, ಇದೀಗ ಜಾಮೀನಿನ ಮೇಲೆ ತಿರುಗಾಡುತ್ತಿರುವ ವಾದಿರಾಜ, ಅಭಿಶೇಕ್, ಮತ್ತು ರಂಜಿತ್ ಎಂಬವರು ಈ‌ ಕೃತ್ಯ ಎಸಗಿರುವುದು ಕಂಡು ಬಂದಿದೆ. ತಾವು […]

ವಚನಭ್ರಷ್ಟ ಕಾಂಗ್ರೆಸ್ ಸರಕಾರದ ಸುಳ್ಳು ಗ್ಯಾರಂಟಿ ವಿರುದ್ದ ತಾಳ್ಮೆ ಕಳೆದುಕೊಂಡ ಜನತೆ ಬೀದಿಗಿಳಿಯುವ ದಿನ ದೂರವಿಲ್ಲ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ 5 ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿ ಚುನಾವಣೆಯನ್ನು ಗೆದ್ದರೂ, ಈ 5 ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ಮೋಸ ಎಸಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಸರಕಾರದ 5 ಗ್ಯಾರಂಟಿ ಯೋಜನೆ ಜಾರಿ ಬಳಿಕ ಬಿಜೆಪಿ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂಬ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಚುನಾವಣಾ ಪೂರ್ವದಲ್ಲಿ ಬೇಕಾಬಿಟ್ಟಿ […]

ಕಾಂಗ್ರೆಸ್ಸಿನ ಜನವಿರೋಧಿ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ

ಉಡುಪಿ: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಜನತೆಗೆ ನೀಡಿರುವ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ದ್ರೋಹ ಬಗೆದಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದಿರುವ ಕಾಂಗ್ರೆಸ್ ಇದೀಗ 1 ವರ್ಷದ ಸರಾಸರಿ ಎಂದು ವರಸೆ ಬದಲಿಸಿ, ವಿದ್ಯುತ್ ದರವನ್ನು ಕೂಡಾ ಧಿಡೀರ್ ಹೆಚ್ಚಿಸಿರುವುದು ಖಂಡನೀಯ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಗೊಂದಲ ಸೃಷ್ಠಿಸುವ ಬದಲು ಸರಕಾರ ಜನಪರ ಆಡಳಿತದತ್ತ ಗಮನ ಹರಿಸುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ […]

ರಾಜ್ಯ ಸರಕಾರದ ಜನವಿರೋಧಿ ನೀತಿ ಬಿಡದಿದ್ದರೆ ನಿತ್ಯ ಹೋರಾಟಕ್ಕೂ ಸಿದ್ದ: ಕಾಪು ಬಿಜೆಪಿ

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ರಾಜ್ಯ ಸರಕಾರ ಎಲ್ಲರಿಗೂ 200 ಯುನಿಟ್ ವಿದ್ಯುತ್ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಮಾತ್ರ ಉಚಿತ ಎನ್ನುತ್ತಾ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟವಾಗಿದೆ. ಅಲ್ಲದೆ ಪ್ರತಿ ಯುನಿಟ್ ವಿದ್ಯುತ್ ಗೆ ಸುಮಾರು […]

ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ತಿರುಚಿದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ: ಬಿಜೆಪಿ

ಬೆಂಗಳೂರು: ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯ (ಕೆಪಿಎಸ್‌ಪಿಸಿಎ) ಅಸ್ತಿತ್ವದಲ್ಲಿರುವ ನಿಬಂಧನೆಗಳನ್ನು ತಿರುಚಲು ಆಡಳಿತಾರೂಢ ಕಾಂಗ್ರೆಸ್ ಪ್ರಯತ್ನಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಬಿಜೆಪಿ ಭಾನುವಾರ ಎಚ್ಚರಿಕೆ ನೀಡಿದೆ. ಗೋಹತ್ಯೆ ನಿಷೇಧವನ್ನು ಎಮ್ಮೆಗಳಿಗೂ ವಿಸ್ತರಿಸದಿರುವುದನ್ನು ಪ್ರಶ್ನಿಸಿ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಗದ್ದಲ ಎಬ್ಬಿಸಿದ ಒಂದು ದಿನದ ಬಳಿಕ ಈ ಎಚ್ಚರಿಕೆ ಬಂದಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್, 2021 ರಲ್ಲಿ ಕೆಪಿಎಸ್‌ಪಿಸಿಎ ಜಾರಿಗೆ ಬಂದಿತು ಮತ್ತು ಅದರ ನಿಬಂಧನೆಗಳನ್ನು ಚೆನ್ನಾಗಿ […]