ಬಿಜೆಪಿ ಅವಲೋಕನ ಸಭೆ: ಯಶ್ ಪಾಲ್ ಸುವರ್ಣ ಭಾಗಿ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಭಾನುವಾರದಂದು ಆಯೋಜಿಸಿದ್ದ ಉಡುಪಿ ವಿಧಾನಸಭಾ ಕ್ಷೇತ್ರದ ಅವಲೋಕನ ಸಭೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿದರು. ಅವಲೋಕನ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ನಿಕಟಪೂರ್ವ ಶಾಸಕ ಕೆ. ರಘುಪತಿ ಭಟ್, ನಗರ ಮಂಡಲ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಮಂಡಲ ಅಧ್ಯಕ್ಷೆ ಶ್ರೀಮತಿ ವೀಣಾ ನಾಯ್ಕ್, ಕ್ಷೇತ್ರ ಚುನಾವಣಾ ಉಸ್ತುವಾರಿ ಗಣೇಶ್ ಹೊಸಬೆಟ್ಟು, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಎಸ್ […]
ಬಿಜೆಪಿ ನಾಯಕರು ನಿದ್ದೆಯ ಮಂಪರಿನಲ್ಲೂ ಕಾಂಗ್ರೆಸ್ ಪಕ್ಷದ ಗ್ಯಾರಂಟಿಯ ಬಗ್ಗೆ ಕನವರಿಸುತ್ತಿದ್ದಾರೆ: ರಮೇಶ್ ಕಾಂಚನ್

ಉಡುಪಿ: ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದಂತಹ ಮತದಾರರೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ ಗ್ಯಾರಂಟಿಯ ಬಗ್ಗೆ ಮಾತನಾಡುತ್ತಿಲ್ಲ, ಏಕೆಂದರೆ ಅವರಿಗೆ ಕಾಂಗ್ರೆಸ್ ಪಕ್ಷವು ನೀಡಿದ ಭರವಸೆ ಹಾಗೂ ಗ್ಯಾರಂಟಿಯನ್ನು ಖಂಡಿತವಾಗಿಯೂ ನೀಡುತ್ತಾರೆ ಎಂಬ ನಂಬಿಕೆ ಇದೆ. ಆದರೆ ಈ ಲಂಚಕೋರ ಹಾಗೂ ಸುಳ್ಳುಗಳ ಭರವಸೆಯನ್ನು ನೀಡಿದಂತಹ ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿಯ ಬಗ್ಗೆ ಯೋಚನೆ ಯಾಗಿದೆ. ನಾವು ಈ ಗ್ಯಾರಂಟಿಯನ್ನು ಅನುಷ್ಠಾನಕ್ಕೆ ತಂದಾಗ ರಾಜ್ಯದಲ್ಲಿ ಬಿಜೆಪಿ ಕಣ್ಮರೆಯಾಗೋದು ಸಹಜ ಅದಕ್ಕಾಗಿ ಈ ಬಿಜೆಪಿ ನಾಯಕರುಗಳು ನಿದ್ದೆಯಲ್ಲಿ ಕೂಡ […]
ಕಾಂಗ್ರೆಸ್ ಗ್ಯಾರಂಟಿ ಜಾರಿಗೊಳಿಸಲು ಮೋಸದ ತಂತ್ರ ಅನುಸರಿಸಿದಲ್ಲಿ ಹೋರಾಟ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ 5 ಉಚಿತಗಳ ಗ್ಯಾರಂಟಿಯನ್ನು ಜಾರಿಗೊಳಿಸುತ್ತೇವೆ ಎಂದು ಪುಂಗಿ ಊದಿದ್ದ ಕಾಂಗ್ರೆಸ್ ಮುಖಂಡರು ಇದೀಗ ಉಲ್ಟಾ ಹೊಡೆದು ಜನತೆಗೆ ನೀಡಿದ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಲು ಹಿಂದೇಟು ಹಾಕುತ್ತಿರುವುದು ಹಾಸ್ಯಾಸ್ಪದ. ಜನರ ತೆರಿಗೆ ಹಣದಿಂದ ಬೇಕಾಬಿಟ್ಟಿ ಉಚಿತಗಳ ಗ್ಯಾರಂಟಿ ಘೋಷಿಸಿ, ಅಧಿಕಾರಕ್ಕೆ ಬಂದು, ಮಾತೆತ್ತಿದರೆ ಉಡಾಫೆ ಉತ್ತರ ನೀಡುವ ಕಾಂಗ್ರೆಸಿಗರಿಗೆ ಜನತೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹರಿಹಾಯ್ದಿದ್ದಾರೆ. ಬಿಜೆಪಿ ಚುನಾವಣಾ […]
ಕಾಂಗ್ರೆಸ್ ಗ್ಯಾರಂಟಿ ಜಾರಿ ವಿಳಂಬ: ಜಿಲ್ಲಾ ಬಿಜೆಪಿ ಖಂಡನೆ

ಉಡುಪಿ: ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ 5 ಗ್ಯಾರಂಟಿ ಕಾರ್ಡ್ ಗಳ ಭರವಸೆಯನ್ನು ಸರಕಾರ ಅಸ್ತಿತ್ವಕ್ಕೆ ಬಂದು 1 ವಾರ ಕಳೆದರೂ ಜಾರಿ ಮಾಡದೇ ಇರುವುದನ್ನು ಜಿಲ್ಲಾ ಬಿಜೆಪಿ ಖಂಡಿಸಿದೆ. ಶನಿವಾರದಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ನಡೆಯನ್ನು ಖಂಡಿಸಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ […]
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಸನ್ಮಾನ

ಕಾಪು: ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಸುರೇಶ್ ಶೆಟ್ಟಿ ಗುರ್ಮೆ ಯವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು.