ಉಡುಪಿ: ನೂತನ ಶಾಸಕ ಯಶ್ ಪಾಲ್ ಸುವರ್ಣ ಅಭಿನಂದನಾ ಸಮಾರಂಭ

ಉಡುಪಿ: ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಯಶ್ಪಾಲ್ ಎ. ಸುವರ್ಣರವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬಿಜೆಪಿ ಜಿಲ್ಲಾಧ್ಯಕ್ಷಕುಯಿಲಾಡಿ ಸುರೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ, ಉಡುಪಿ […]
ಬಂಟ್ವಾಳ: ಬಿಜೆಪಿ-ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ; ದೂರು ದಾಖಲು

ಚುನಾವಣೋತ್ತರ ಹಿಂಸಾಚಾರದ ಆರೋಪದ ಪ್ರಕರಣದಲ್ಲಿ, ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಮೇಲೆ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಬಜರಂಗದಳ ಮತ್ತು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾರ್ಯಕರ್ತರು ಆರೋಪಿಸಿದ್ದಾರೆ. ಮೂಲಗಳ ಪ್ರಕಾರ ಬಂಟ್ವಾಳ ತಾಲೂಕಿನ ಮಾಣಿ ಬಳಿ ನಡೆದ ದಾಳಿಯಲ್ಲಿ ಬಜರಂಗದಳ ಕಾರ್ಯಕರ್ತ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಎಂಬುವವರಿಗೆ ಗಾಯಗಳಾಗಿವೆ. ಎರಡು ಗುಂಪುಗಳ ನಡುವಿನ ಸೇಡಿನ ಪ್ರಕ್ರಿಯೆಯಲ್ಲಿಈ ಪ್ರಕರಣ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಶಂಕಿತ ದುಷ್ಕರ್ಮಿಗಳು ಓಮ್ನಿ ಕಾರಿನಲ್ಲಿ […]
ಮೇ 25 ರಂದು ಯಶ್ ಪಾಲ್ ಸುವರ್ಣ ವಿಜಯೋತ್ಸವ ಅಭಿನಂದನಾ ಸಮಾರಂಭ; ಬೃಹತ್ ವಾಹನ ಜಾಥಾ

ಉಡುಪಿ: ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಯಶ್ ಪಾಲ್ ಸುವರ್ಣ ರವರ ವಿಜಯೋತ್ಸವ ವಾಹನ ಜಾಥಾ ಮತ್ತು ಅಭಿಮಾನಿಗಳ ಅಭಿನಂದನಾ ಸಮಾರಂಭವನ್ನು ಉಡುಪಿ ನಗರ ಬಿಜೆಪಿ ವತಿಯಿಂದ ಮೇ 25 ರಂದು ಆಯೋಜಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಪರ್ಕಳ ಹೈಸ್ಕೂಲ್ ಬಳಿ ವಿಜಯೋತ್ಸವದ ವಾಹನ ಜಾಥಾಕ್ಕೆ ಚಾಲನೆ ನೀಡಲಿದ್ದು, ಈ ವಾಹನ ಜಾಥಾ ಉಡುಪಿ ನಗರ ಮಂಡಲದ ಎಲ್ಲಾ ವಾರ್ಡ್ ಹಾಗೂ ಗ್ರಾಮ ಪಂಚಾಯತ್ ಮುಖ್ಯ ರಸ್ತೆಯಲ್ಲಿ ಸಾಗಿ ಬರಲಿದೆ. ಸಂಜೆ ಉಡುಪಿ ಕುಂಜಿಬೆಟ್ಟುವಿನ ಜಿಲ್ಲಾ […]
ಮೇ 25 ರಂದು ಉಡುಪಿ ಜಿಲ್ಲೆಯ ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮ

ಉಡುಪಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮಗದೊಮ್ಮೆ ಭರ್ಜರಿ ವಿಜಯ ದಾಖಲಿಸಿರುವುದು ಉಡುಪಿ ಜಿಲ್ಲಾ ಬಿಜೆಪಿಗೆ ಹೆಮ್ಮೆ ತಂದಿದೆ. ಈ ಪ್ರಯುಕ್ತ ಮೇ 25, ಗುರುವಾರ ಸಂಜೆ ಗಂಟೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಐವರು ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ವಿ.ಸುನೀಲ್ ಕುಮಾರ್ ಕಾರ್ಕಳ, ಕಿರಣ್ ಕುಮಾರ್ […]
ಪುತ್ತೂರು ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣ: ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ನೀಡಿದ ಶಾಸಕ ಹರೀಶ್ ಪೂಂಜಾ

ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಪೊಲೀಸರ ಈ ಅಮಾನವೀಯ ಕೃತ್ಯವನ್ನು ಖಂಡಿಸಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸರ ಮನಸ್ಥಿತಿ ಮತ್ತು ವರ್ತನೆಯ ದರ್ಶನವಾಗುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯುವಾಗ ಓರ್ವ ಶಾಸಕನಾಗಿ ಅದರ ವಿರುದ್ಧ ಹೋರಾಟ ಮಾಡುತ್ತೇನೆ ಎಂದರು. ಈ ಬಗ್ಗೆ ದ.ಕ. ಜಿಲ್ಲಾ […]