ಉಡುಪಿ-ಕಾರ್ಕಳದಲ್ಲಿ ಮತ್ತೊಮ್ಮೆ ಅರಳಿದ ಕಮಲ; ಸುನಿಲ್ ಕುಮಾರ್- ಯಶ್ ಪಾಲ್ ಸುವರ್ಣ ಗೆ ಒಲಿದ ವಿಜಯ

ಉಡುಪಿ: ಬಿಜೆಪಿ- ಕಾಂಗ್ರೆಸ್ ನಡುವೆ ನೇರಹಣಾಹಣಿಯ ಉಡುಪಿ ಮತ್ತು ಕಾರ್ಕಳ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಿದೆ. ಫಲಿತಾಂಶ ಉಡುಪಿ ಪ್ರಸಾದ್ ಕಾಂಚನ್- ಕಾಂಗ್ರೆಸ್: 52930 ಯಶಪಾಲ್ ಎ ಸುವರ್ಣ- ಬಿಜೆಪಿ: 77386 ಕಾರ್ಕಳ ಉದಯ ಕುಮಾರ್ ಶೆಟ್ಟಿ- ಕಾಂಗ್ರೆಸ್: 71615 ವಿ ಸುನಿಲ್ ಕುಮಾರ್- ಬಿಜೆಪಿ: 76019
128 ಕ್ಷೇತ್ರಗಳಲ್ಲಿ ಮುನ್ನಡೆಯೊಂದಿಗೆ ಬಹುಮತದತ್ತ ಕಾಂಗ್ರೆಸ್ ; ಚಳ್ಳಕೆರೆಯಲ್ಲಿ ಗೆಲುವು ದಾಖಲು

ಬೆಂಗಳೂರು: ಬಹು ಸುತ್ತಿನ ಇವಿಎಂ ಎಣಿಕೆಯ ನಂತರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಹುಮತದತ್ತ ಮುನ್ನಡೆಯುತ್ತಿರುವುದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚಿಸುವುದು ಬಹುತೇಕ ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷವು 128 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 68 ರಲ್ಲಿ, ಜೆ.ಡಿ.ಎಸ್ 22 ಅನ್ಯರು 6 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದ್ದಾರೆ. ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅದಾಗಲೇ ಗೆಲುವು ಸಾಧಿಸಿದೆ.
ಆರಂಭಿಕ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ ಕಾಂಗ್ರೆಸ್; ಮೊದಲನೆ ಹಂತದಲ್ಲಿ 116 ಸೀಟುಗಳಲ್ಲಿ ಮುನ್ನಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮೊದಲನೆ ಹಂತದ ಎಣಿಕೆಯಲ್ಲಿ ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿದ್ದು, 116 ಸೀಟುಗಳಲ್ಲಿ ಮುನ್ನಡೆ ಕಾಯುಕೊಂಡಿದೆ. ಅಂಚೆ ಮತದಾನದ ಎಣಿಕೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಮುನ್ನುಗುತ್ತಿದೆ. ಭಾರತೀಯ ಪಕ್ಷ 83 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಜೆ.ಡಿ.ಎಸ್ 20 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ. ಇತರ 01 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಏತನ್ಮಧ್ಯೆ ಶ್ರೀರಾಮುಲು, ಸುಧಾಕರ್, ರಮೇಶ್ ಜಾರಕಿಹೊಳಿ, ಕುಮಾರಸ್ವಾಮಿ, ಬಿ.ಸಿ.ಪಾಟೀಲ್, ಸಿ.ಟಿ.ರವಿ, ಕಾರಜೋಳ, ಸೋಮಣ್ಣ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ.
ಎಕ್ಸಿಟ್ ಪೋಲ್ ವರದಿ ಸುಳ್ಳಾಗಲಿದೆ; ಭಾರತೀಯ ಜನತಾ ಪಕ್ಷ ಸರಕಾರ ರಚಿಸಲಿದೆ: ಶೋಭಾ ಕರಂದ್ಲಾಜೆ

ಬೆಂಗಳೂರು: ಎಕ್ಸಿಟ್ ಪೋಲ್ ಸಮೀಕ್ಷಾ ವರದಿ ಸುಳ್ಳಾಗಲಿದೆ. ಭಾರತೀಯ ಜನತಾ ಪಕ್ಷ ಈ ಬಾರಿ ಸರಕಾರ ರಚಿಸಲಿದೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಹೇಳಿದರು. ಗುರುವಾರ ನಗರದ ಕ್ಯಾಪಿಟಲ್ ಹೋಟೆಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಜನರ ಉತ್ಸಾಹದ ಮತದಾನ, ಬೂತ್‍ಗಳಲ್ಲಿ ನಮಗೆ ಕಂಡು ಬಂದ ವರದಿಗಳು ಇದಕ್ಕೆ ಕಾರಣ. ನಮ್ಮ ಕಾರ್ಯಕರ್ತರ ಸಮೀಕ್ಷೆ ಆಧಾರದಲ್ಲಿ ನೂರಕ್ಕೆ 100 ಬಿಜೆಪಿ ಬಹುಮತದ […]
ಮೂಡುಶೆಡ್ಡೆಯಲ್ಲಿ ಚುನಾವಣೋತ್ತರ ಗಲಭೆ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಮಂಗಳೂರು: ಮೂಡುಶೆಡ್ಡೆಯಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಐದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಜ್ಪೆ, ಕಾವೂರು, ಮೂಡುಬಿದಿರೆ, ಸುರತ್ಕಲ್ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಂಶುಕುಮಾರ್ ತಿಳಿಸಿದ್ದಾರೆ. ಬುಧವಾರ ತಡರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಲ್ಲು […]