ಕಾಂಚನ್ ಉಪನಾಮಕ್ಕೆ ಮಾಡಿದ ಅವಮಾನ ಮೊಗವೀರ ಸಮುದಾಯಕ್ಕೆ ಅವಮಾನ ಮಾಡಿದಂತೆ: ರಮೇಶ್ ಕಾಂಚನ್

ಉಡುಪಿ: ಕಾಂಚನ್ ಎನ್ನುವುದು ಕರಾವಳಿ ತಡಿಯ ಉಡುಪಿಯ ಶ್ರಮ ಜೀವಿಗಳಾದ ಮೊಗವೀರ ಸಮುದಾಯದ ಹೆಮ್ಮೆಯ ಕುಲನಾಮ. ಇಲ್ಲಿ ಕಾಂಚನ್ ಮೂಲ ಸ್ಥಾನ ಕೂಡ ಹೊಂದಿದೆ. ಆದರೆ ನಮ್ಮ ಕುಲನಾಮವನ್ನು ಉಡುಪಿ ಬಿಜೆಪಿಯ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ವಿಕಾರವಾಗಿ ತಿರುಚಿ ಇಡೀ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ. ಸಮಾಜ ಬಾಂಧವರು ವಿಚಲಿತರಾಗದೇ ಶಾಂತಿಯುತವಾಗಿ ಇರಬೇಕೆಂದು ಇಡೀ ಸಮಾಜದ ಪರವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ವಿನಂತಿಸಿಕೊಂಡಿದ್ದಾರೆ. ಕೈಲಾಗದವರ ಕೊನೆಯ ಅಸ್ತ್ರ ಅಪಪ್ರಚಾರ. ಗೆಲ್ಲುವ ಅಮಲಿನಲ್ಲಿದ್ದ ಬಿಜೆಪಿ ನಾಯಕರು ಪ್ರಸಾದ್ […]
ಇಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಸರ್ಮಾ ಅವರಿಂದ ಹರೀಶ್ ಪೂಂಜಾ ಪರ ಪ್ರಚಾರ

ಬೆಳ್ತಂಗಡಿ: ಚುನಾವಣಾ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಎಲ್ಲಾ ಪಕ್ಷಗಳ ಘಟಾನುಘಟಿ ನಾಯಕರು ಕರ್ನಾಟಕದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಹಿಂದುತ್ವದ ಭದ್ರಕೋಟೆ ಎನಿಸಿಕೊಂಡಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಹಿಂದುತ್ವದ ಬೆಂಕಿ ಚೆಂಡು ಖ್ಯಾತಿಯ ಯೋಗಿ ಆದಿತ್ಯನಾಥ್ ಮತ್ತು ಹಿಮಂತ ಬಿಸ್ವ ಸರ್ಮಾ ಬೃಹತ್ ರೋಡ್ ಶೋ ಗಳಲ್ಲಿ ಭಾಗವಹಿಸಲಿದ್ದಾರೆ. ಇಂದು ಸಂಜೆ ಬೆಳ್ತಂಗಡಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಸರ್ಮಾ ಅವರ ರೋಡ್ ಶೋ ನಡೆಯಲಿದೆ. ಸಂಜೆ 4 ಗಂಟೆಗೆ ಉಜಿರೆ ಕಾಲೇಜು […]
ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾವ ಕಾಂಗ್ರೆಸ್ ಮುಂದಿಲ್ಲ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಹನುಮಂತ ದೇವರು ಯಾವ ಸಂಘಟನೆಯ ವೈಯುಕ್ತಿಕ ಸೊತ್ತಲ್ಲಾ, ಬಜರಂಗದಳವನ್ನು ಸಮೀಕರಿಸುವ ಮೂಲಕ ಪಕ್ಷವೊಂದು ಭಕ್ತರ ಭಾವನೆಗೆ ಧಕ್ಕೆ ತರುವುದು ಸರಿಯಾದ ನಡೆಯಲ್ಲ. ಹನುಮಂತ ದೇಶ ವಿದೇಶ ಸೇರಿದಂತೆ ಪ್ರತಿ ಭಾರತೀಯನ ಹೃದಯದಲ್ಲಿ ಪೂಜನೀಯ ದೇವರು ಎಂದು ಉಡುಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾವ ಕಾಂಗ್ರೆಸ್ ಮುಂದಿಲ್ಲ. ಬಿಜೆಪಿ ಓಟಿಗಾಗಿ ವಾಸ್ತವ ವಿಷಯವನ್ನು ತಿರುಚಿ ಸುಳ್ಳು ಸುದ್ದಿ ಹರಡುತ್ತಿದೆ. ಪ್ರಜ್ಞಾವಂತ […]
ಬೆಳ್ತಂಗಡಿಯನ್ನು ದೇಶದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ಪಣ: ಹರೀಶ್ ಪೂಂಜಾ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ನಡ, ಮಡಂತ್ಯಾ ರು ಮತ್ತು ಕಲ್ಲೇರಿಯಲ್ಲಿ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗಿಯಾದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಹರೀಶ್ ಪೂಂಜಾ, ಕ್ಷೇತ್ರದ ಮತದಾರರು ಮೊದಲ ಬಾರಿಗೆ ಗೆಲ್ಲಿಸಿದಾಗ ರಸ್ತೆ, ಕಿಂಡಿ ಅಣೆಕಟ್ಟು, ಶಾಲಾ- ಕಾಲೇಜುಗಳ ಅಭಿವೃದ್ದಿ, ಗ್ರಂಥಾಲಯ ಹಾಗೂ ಧಾರ್ಮಿಕ ಕೇಂದ್ರಗಳ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ಬಾರಿಯೂ ಗೆಲ್ಲಿಸಿದಲ್ಲಿ ಬೆಳ್ತಂಗಡಿಯನ್ನು ದೇಶದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುತ್ತೇನೆ ಎಂದು ಅವರು ಹೇಳಿದರು. ಸಭೆಯಲ್ಲಿ ಮಂಡಲ ಬಿಜೆಪಿ […]
ಪಕ್ಷ ಪ್ರಚಾರಕ್ಕೆ ಕರುನಾಡ ಸಿಂಘಂ ಖ್ಯಾತಿಯ ಅಣ್ಣಾಮಲೈ ಸಾಥ್: ಇಂದು ಕೇಸರಿ ಕಲರವ ಬೃಹತ್ ರೋಡ್ ಶೋ

ಉಡುಪಿ: ಇಂದು ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಮತ್ತು ಕರ್ನಾಟಕದ ಸಿಂಘಂ ಖ್ಯಾತಿಯ ಅಣ್ಣಾಮಲೈ ನೇತೃತ್ವದಲ್ಲಿ ಬೃಹತ್ ರೋಡ್ ಶೋ ಏಳೂರು ಮೊಗವೀರ ಭವನದಿಂದ ಹೊರಟು ವಡಭಾಂಡೇಶ್ವರ ಬಲರಾಮ ದೇವಸ್ಥಾನವನ್ನು ತಲುಪಲಿದೆ. ಆ ಬಳಿಕ ನಡೆಯುವ ಬೃಹತ್ ಸಮಾವೇಶದಲ್ಲಿ ಕೆ. ಅಣ್ಣಾಮಲೈ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.