ಡಾ.ವಿ.ಎಸ್ ಆಚಾರ್ಯರ ಮಾದರಿ ಉಡುಪಿ ಕ್ಷೇತ್ರದ ಕನಸನ್ನು ನನಸಾಗಿಸುವ ಗುರಿ: ಯಶ್ ಪಾಲ್ ಸುವರ್ಣ

ಉಡುಪಿ: ಇಲ್ಲಿನ ಬಿಜೆಪಿ ಅಭ್ಯರ್ಥಿ ಯಶ್ ಪಾಲ ಸುವರ್ಣ ಇಂದು ಕಳ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಲೋನಿಗಳಿಗೆ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ಮತ ಯಾಚನೆ ಮಾಡಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಡುಪಿಯನ್ನು ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡುವ ಗುರಿ ನನ್ನದು. ಡಾ.ವಿ ಎಸ್ ಆಚಾರ್ಯರವರ ಅಭಿವೃದ್ಧಿಯ ಕನಸನ್ನು ನನಸು ಮಾಡಿ ಉಡುಪಿಯನ್ನು 224 ಕ್ಷೇತ್ರಗಳಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದರು. ಕಳೆದ ಕೆಲವು ವರ್ಷಗಳಿಂದ ರಘುಪತಿ ಭಟ್ ಉಡುಪಿಯ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವರ […]

ಕಾಂಗ್ರೆಸ್ ಸಂವಿಧಾನದ ಪರವಿರುವ ಪಕ್ಷ: ಬಿ.ಕೆ ಹರಿಪ್ರಸಾದ್

ಕಾರ್ಕಳ: ಕಾಂಗ್ರೆಸ್ ಪಕ್ಷ ರಾಷ್ಟ್ರ ಧ್ವಜ ಹಾಗೂ ಸಂವಿಧಾನದ ಪರವಿರುವ ಪಕ್ಷ ಎಂದು ರಾಜ್ಯ ಸಭಾ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದರು. ಅವರು ಮಂಜುನಾಥ್ ಪೈ ಸಭಾಭವನದಲ್ಲಿ ಗುರುವಾರ ನಡೆದ ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದ ವಿಜಯ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಕಳೆದುಕೊಂಡಾಗ ನಮ್ಮ ಚುನಾಯಿತ ಪ್ರತಿನಿಧಿಗಳು ಯಾಕೆ ಪ್ರಶ್ನಿಸಿಲ್ಲ. ಕೊಡಗಿನಲ್ಲಿ ಭೂ ಕುಸಿತ, ಪ್ರವಾಹ, ಕೋವಿಡ್ ಸಮಯದಲ್ಲಿ ಮೃತಪಟ್ಟವರನ್ನು ಒಮ್ಮೆಯೂ ಪ್ರಧಾನಿ ನೆನಪಿಸಲಿಲ್ಲ, ಪರಿಹಾರ ನೀಡಲಿಲ್ಲ, ಕೇಂದ್ರ ಸರ್ಕಾರದ […]

ಅಭಿಮಾನಿಗಳು, ಪಕ್ಷ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಬೆಳ್ತಂಗಡಿ ಅಭ್ಯರ್ಥಿ ಹರೀಶ್ ಪೂಂಜಾ

ಬೆಳ್ತಂಗಡಿ: ಎರಡನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಅಪೂರ್ವ ಕ್ಷಣಗಳಿಗೆ ಸಾಕ್ಷಿಯಾದೆ. ಈ ಕ್ಷಣಗಳು ನಿಜಕ್ಕೂ ಅವಿಸ್ಮರಣೀಯವಾದುದು. ಬೆಳ್ತಂಗಡಿಗೆ ಬೆಳ್ತಂಗಡಿಯೇ ಸಂಭ್ರಮಿಸಿದ ದಿನವಿದು. ನವ ಬೆಳ್ತಂಗಡಿ ನಿರ್ಮಾಣದ ಕನಸು ಹೊತ್ತು ಮೊದಲ ಬಾರಿಗೆ 2018 ರಲ್ಲಿ ನಾಮಪತ್ರ ಸಲ್ಲಿಸಿದ್ದೆ. ಇಂದು 2023 ರಲ್ಲಿ ನವ ಬೆಳ್ತಂಗಡಿಯನ್ನು ಹೊಸ ಪರ್ವಕ್ಕೆ ಕೊಂಡೊಯ್ಯುವ ಸಂಕಲ್ಪದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. ಇದು ಕೇವಲ ನಾಮಪತ್ರ ಸಲ್ಲಿಕೆಯ ದಿನವಲ್ಲ, ವಿಜಯ ಸಂಕಲ್ಪದ ದಿನ. ಮೇ 13 ರಂದು ಮತ್ತೊಮ್ಮೆ ಸಂಭ್ರಮಿಸುವ ಸಂಕಲ್ಪದೊಂದಿಗೆ ಮರಳಿದ್ದೇವೆ, […]

ಮೂಡಬಿದ್ರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ನಾಮಪತ್ರ ಸಲ್ಲಿಕೆ: ಕಾರ್ಯಕರ್ತರಿಗೆ ಅಭಿನಂದನೆ

ಮೂಡಬಿದ್ರೆ: ಮಂಗಳವಾರ ಮೂಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಉಮಾನಾಥ್ ಕೋಟ್ಯಾನ್ ಮೂಲ್ಕಿ ಮೂಡುಬಿದಿರೆಯ ಜನಸೇವೆಗಾಗಿ ಮೂರನೇ ಬಾರಿಗೆ ನಾಮಪತ್ರವನ್ನು ಸಲ್ಲಿಸುತ್ತಿದ್ದು ಈ ಸದಾವಕಾಶ ಮತ್ತು ಸುಯೋಗಕ್ಕೆ ಕಾರಣವಾದ ಭಾರತೀಯ ಜನತಾ ಪಾರ್ಟಿ ಹಾಗೂ ಪಕ್ಷದ ಎಲ್ಲಾ ನಾಯಕರುಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಸಾಗರೋಪಾದಿಯಲ್ಲಿ ಆಗಮಿಸಿ ಮೂಡುಬಿದಿರೆಯನ್ನು ಕೇಸರಿಮಯಗೊಳಿಸಿದ ಎಲ್ಲಾ ಕಾರ್ಯಕರ್ತ ಬಂಧುಗಳು, ಜೊತೆಗೆ, ಈ ಸಮಾವೇಶಕ್ಕೆ ಆಗಮಿಸಿದ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಸಂಸದ […]

ಬೈಂದೂರು: ಕಾಂಗ್ರೆಸ್ ಕೈ ಹಿಡಿದ ಕಮಲ ಕಾರ್ಯಕರ್ತರು

ಬೈಂದೂರು: ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತಗಳನ್ನು ಒಪ್ಪಿ ಬೈಂದೂರು ವಿಧಾನಸಭಾ ಕ್ಷೇತ್ರದ ಅನೇಕ ಬಿಜೆಪಿ ಮುಖಂಡರು ಕಾಂಗ್ರೆಸ್‌ ಕುಟುಂಬಕ್ಕೆ ಸೇರ್ಪಡೆಗೊಳ್ಳುತ್ತಿದ್ದು, ಕಳೆದೊಂದು ತಿಂಗಳಿನಿಂದ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಪಕ್ಷದ ಬಾವುಟಗಳನ್ನು ಹಿಡಿದಿದ್ದಾರೆ. ಕಟ್‌ ಬೇಲ್ತೂರಿನ ಬಿಜೂರು 3ನೇ ಹಾಗೂ 4ನೇ ವಾರ್ಡ್ ನ ಸಕ್ರಿಯ ಬಿಜೆಪಿಯ ಕಾರ್ಯಕರ್ತರು ಬಿಜೂರು ವಜ್ರದುಂಬಿ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ದೇವಾಡಿಗ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಸರಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್‌ ಪಕ್ಷದ ಬಾವುಟ ನೀಡಿ, ಪಕ್ಷದ […]