ಭಾರತೀಯ ಜನತಾ ಪಕ್ಷದ ಅಂತಿಮ ಪಟ್ಟಿ ಬಿಡುಗಡೆ: ಜಗದೀಶ್ ಶೆಟ್ಟರ್ ವಿರುದ್ದ ಮಹೇಶ್ ತೆಂಗಿನಕಾಯಿ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ 10 ಅಭ್ಯರ್ಥಿಗಳ ಮೂರನೇ ಮತ್ತು ಕೊನೆಯ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಮೇ 10 ರಂದು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳು ಮತ್ತು ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಪಕ್ಷವು ತನ್ನ ಅನುಭವಿ ನಾಯಕ ಅರವಿಂದ ಲಿಂಬಾವಳಿಯನ್ನು ಮಹದೇವಪುರ ಕ್ಷೇತ್ರದಿಂದ ಕೈಬಿಟ್ಟಿದ್ದು ಈ ಸ್ಥಾನದಲ್ಲಿ ಅವರ ಪತ್ನಿ ಮಂಜುಳಾ ಅರವಿಂದ್ ಲಿಂಬಾವಳಿಯನ್ನು ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ಜಗದೀಶ […]
ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ: ಸಾವಿರಾರು ಅಭಿಮಾನಿಗಳು ಭಾಗಿ

ಕಾಪು: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಸಾವಿರಾರು ಮಂದಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತೆ ಮೆರವಣಿಗೆ ನಡೆಸಿ, ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಲಾಲಾಜಿ ಆರ್. ಮೆಂಡನ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ರಘುಪತಿ ಭಟ್, ಉಡುಪಿ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, […]
ಬಬ್ಬುಸ್ವಾಮಿ ದೈವಸ್ಥಾನಕ್ಕೆ ಭೇಟಿ ನೀಡಿದ ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ

ಉಡುಪಿ: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾದ ಗುರ್ಮೆ ಸುರೇಶ್ ಶೆಟ್ಟಿಯವರು ಶುಕ್ರವಾರದಂದು ಕೊಂಬಗುಡ್ಡೆ ಮಲ್ಲಾರ್,ಉಚ್ಚಿಲ, ಮುಳೂರ್, ಕಾಪು, ಉಳಿಯಾರಗೋಳಿ, ಕಟಪಾಡಿ ಪೇಟೆಬೆಟ್ಟು, ಗುಡ್ಡೆಯಂಗಡಿ, ಉದ್ಯಾವರ, ಬಬ್ಬುಸ್ವಾಮಿ ದೈವಸ್ಥಾನಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಲಾಲಾಜಿ ಆರ್ ಮೆಂಡನ್ ಸೇರಿದಂತೆ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಭಾರತೀಯ ಜನತಾ ಪಕ್ಷದ ಚುನಾವಣಾ ಪೂರ್ವಭಾವಿ ಸಭೆ

ಉಡುಪಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯು ಹಾಲಿ ಶಾಸಕ ಕೆ.ರಘುಪತಿ ಭಟ್ ಅವರ ಮಾರ್ಗದರ್ಶನದಲ್ಲಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ವೀಣಾ ನಾಯ್ಕ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವ […]
ಪಕ್ಷದ ಕಾರ್ಯತಂತ್ರದಂತೆ ಚುನಾವಣೆ ಎದುರಿಸುತ್ತೇವೆ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರಗಾರಿಕೆ ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಹೊರತು ಎದುರಾಳಿ ಅಭ್ಯರ್ಥಿಗಳ ಆಲೋಚನೆಯಿಂದಲ್ಲ. ಬಿಜೆಪಿಯ ಅಭ್ಯರ್ಥಿ ಒಂದೇ ಸಮುದಾಯಕ್ಕೆ ಸಂಬಂಧಪಟ್ಟಿದ್ದರೂ, ಇಲ್ಲಿನ ಮತದಾರರು ಬುದ್ದಿವಂತರು ಮತ್ತು ವಿದ್ಯಾವಂತರೂ ಆಗಿರುವ ಕಾರಣ ಸರಿಯಾದ ಶಾಸಕನನ್ನು ಆಯ್ಕೆ ಮಾಡಲಿದ್ದಾರೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಅವರು ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಕಳೆದ ಆರು ತಿಂಗಳಿನಿಂದ ಕ್ಷೇತ್ರದಲ್ಲಿ ಸಿದ್ದತೆ ನಡೆಸುತ್ತಿದ್ದು, 100 ಸದಸ್ಯರ ಕಮಿಟಿ […]