ಸಿದ್ದರಾಮಯ್ಯನವರನ್ನು ಹೊಡೆದು ಹಾಕಿ ಎಂದ ಅಶ್ವಥ್ ನಾರಾಯಣ್ ವಿರುದ್ದ ಪ್ರಕರಣ ದಾಖಲಿಸಿ: ವೆರೋನಿಕಾ ಕರ್ನೆಲಿಯೋ ಒತ್ತಾಯ

ರಾಜ್ಯದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎನ್ನುವ ಮೂಲಕ ಪ್ರಚೋದನಾತ್ಮಕವಾಗಿ ಮಾತನಾಡಿದ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ಅವರ ವಿರುದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ. ರಾಜ್ಯಕ್ಕೆ ಉತ್ತಮ ಜನಪರ ಆಡಳಿತ ನೀಡಿರುವ ಹಿರಿಯ ರಾಜಕಾರಣಿ ಸಿದ್ದರಾಮಯ್ಯ ಅವರ ವಿರುದ್ದ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ಮಾತನಾಡಿದ ಪದಗಳನ್ನು ಯಾರೂ ಕೂಡ […]
ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶ

ಉಡುಪಿ: ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶದ ಸಂಚಾಲಕ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ನೇತೃತ್ವದಲ್ಲಿ ನಡೆದ ವಿವಿಧ ಮೋರ್ಚಾಗಳ ರಾಜ್ಯ ಪದಾಧಿಕಾರಿಗಳು ಮತ್ತು ಆಹ್ವಾನಿತರ ಸಭೆಯಲ್ಲಿ ಬಿಜೆಪಿ ಮೋರ್ಚಾ ಸಮಾವೇಶಗಳ ಸಹ ಸಂಚಾಲಕ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಭಾಗವಹಿಸಿದರು. ಸಭೆಯಲ್ಲಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಶ್ರೀಮತಿ ಗೀತಾ ವಿವೇಕಾನಂದ, ಎಸ್ ಟಿ. […]
ಪಕ್ಷದ ಹಿರಿಯರು ಅವಕಾಶ ನೀಡಿದರೆ ಜನಸೇವೆಗೆ ಸಿದ್ದ: ವಿಜಯ್ ಕೊಡವೂರು

ಉಡುಪಿ: ನಾನು ಟಿಕೆಟ್ ಆಕಾಂಕ್ಷಿಯಲ್ಲ, ಆದರೆ ಪಕ್ಷದ ಹಿರಿಯರು ಅಪೇಕ್ಷೆ ಪಟ್ಟರೆ ಜನಸೇವೆಗೆ ಸಿದ್ದ ಎಂದು ಕೊಡವೂರು ವಾರ್ಡಿನ ನಗರಸಭಾ ಸದಸ್ಯ ವಿಜಯ್ ಕೊಡವೂರು ಹೇಳಿದರು. ಕೊಡವೂರು ವಾರ್ಡಿನಲ್ಲಿ ಕಳೆದ ಎರಡೂ ಕಾಲು ವರ್ಷದಿಂದ ಮಾಡಿದ ಅಭಿವೃದ್ದಿ ಕೆಲಸಗಳ ಮಾಹಿತಿಯನ್ನೊಳಗೊಂಡ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಕೊಡವೂರು ವಾರ್ಡಿನ ಶಕ್ತಿ, ಸವಾಲು ಮತ್ತು ಅಪೇಕ್ಷೆಗಳ ಬಗ್ಗೆ ತಿಳಿಯಲು ಸರ್ವೇ ನಡೆಸಿ ಬಳಿಕ ಆ ಸರ್ವೆಯ ಮಾಹಿತಿಯನ್ನಾಧರಿಸಿ 17 ಸಮಿತಿಗಳನ್ನು ರಚನೆ ಮಾಡಿ, ದಿವ್ಯಾಂಗರು, ಕೃಷಿಕರು, ನಿರುದ್ಯೋಗಿಗಳು, ವಿದ್ಯಾರ್ಥಿಗಳು, […]
ಕರ್ನಾಟಕದಲ್ಲಿ ಪೂರ್ಣ ಬಹುಮತದ ಬಿಜೆಪಿ ಸರಕಾರ ರಚನೆ: ಅಮಿತ್ ಶಾ

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಕಳೆದ 2 ತಿಂಗಳಲ್ಲಿ ನಾನು ರಾಜ್ಯಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ ಮತ್ತು ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ನೋಡಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿಗೆ ಭಾರಿ ಜನಾದೇಶ ಸಿಗಲಿದೆ.ಮಂಡ್ಯದ ಜನತೆ ಕೂಡ ಈಗ ವಂಶ ಪಾರಂಪರ್ಯ ಪಕ್ಷಗಳನ್ನು ಬಿಟ್ಟು ಬಿಜೆಪಿಯ ಅಭಿವೃದ್ಧಿ ರಾಜಕಾರಣವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕಕ್ಕೆ ಶುಭ ಸೂಚನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮುಂಬರುವ ರಾಜ್ಯಗಳ […]
ವಿಶ್ವ ನಾಯಕ ಪ್ರಧಾನಿ ಮೋದಿ ಹೆಸರೆತ್ತಲು ಬಿ.ಕೆ. ಹರಿಪ್ರಸಾದ್ ಅವರಿಗೆ ಯಾವ ನೈತಿಕತೆ ಇದೆ?: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ದೇಶಕ್ಕೆ ಸಮರ್ಥ ನಾಯಕತ್ವವನ್ನು ನೀಡಿ ‘ಸರ್ವ ಸ್ಪರ್ಶಿ; ಸರ್ವ ವ್ಯಾಪಿ’ ಅಭಿವೃದ್ಧಿಯ ಸಹಿತ ತನ್ನ ವೈಶಿಷ್ಟ್ಯಪೂರ್ಣ ಕಾರ್ಯವೈಖರಿಯ ಮೂಲಕ ಜನಮನ್ನಣೆ ಪಡೆದು ವಿಶ್ವನಾಯಕರೆನಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ ‘ಕೋತ್ವಾಲ್ ಶಿಷ್ಯ’ ಖ್ಯಾತಿಯ ಬಿ.ಕೆ. ಹರಿಪ್ರಸಾದ್ ರವರಿಗೆ ಪ್ರಧಾನಿ ಮೋದಿಯವರ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ಅವರು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ನಿಂದ ನಡೆದ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ […]