ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸಭೆ

ಉಡುಪಿ: ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆಯು ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ಉಸ್ತುವಾರಿ ಅಶೋಕ ಮೂರ್ತಿ ಮಾತನಾಡಿ ಸಂಘಟನಾತ್ಮಕ ವಿಚಾರಗಳ ಕುರಿತು ಸಮಗ್ರ ಮಾಹಿತಿ ನೀಡಿದರು. […]
ಯಕ್ಷಗಾನ ಕಲೆಯ ಮೇರು ಕಲಾವಿದ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ

ಮಂಗಳೂರು: ಯಕ್ಷಗಾನ ಕಲೆಯ ಮೇರು ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅಂತ್ಯ ಸಂಸ್ಕಾರ ಡಿ.1 ರಂದು (ನಾಳೆ) ನೆರವೇರಲಿದೆ. ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರಿಗೆ ವೀಕ್ಷಣೆಗೆ ಇಡಲಾಗುವುದು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೇರು ಕಲಾವಿದನ ಅಗಲಿಕೆಗೆ ಗಣ್ಯರು, ಯಕ್ಷಗಾನ ಕಲಾವಿದರು ಮತ್ತು ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಡಾ. ಸಂಜಯ್ ಜೈಸ್ವಾಲ್ ಉಡುಪಿ ಭೇಟಿ

ಉಡುಪಿ: ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಡಾ. ಸಂಜಯ್ ಜೈಸ್ವಾಲ್ ಉಡುಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲದ ಹೋಟೆಲ್ ವ್ಯಾಲಿವ್ಯೂನಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಮಾಧ್ಯಮ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಹಾಗೂ ವಿಹಿಂಪ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್ ಉಪಸ್ಥಿತರಿದ್ದರು.
ಕಳತ್ತೂರು: ಕಾಂಗ್ರೆಸ್ ವಾರ್ಡ್ ಕಾರ್ಯಕರ್ತರ ಸಭೆ

ಕಳತ್ತೂರು: ಕುತ್ಯಾರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಕಳತ್ತೂರು 2ನೇ ವಾರ್ಡಿನ ಕಾರ್ಯಕರ್ತರ ಸಭೆಯು ಚಂದ್ರನಗರ ಬಟರ್ ಫ್ಲೈ ಗೆಸ್ಟ್ ಹೌಸ್ ಪಾರ್ಟಿಹಾಲ್ ಸಭಾಂಗಣದಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ಹೆಸರನ್ನು ಮತ ಪಟ್ಟಿಯಿಂದ ತೆಗೆದು ಹಾಕುವ ಹುನ್ನಾರವಿದ್ದು ಕಾರ್ಯಕರ್ತರನ್ನು ತಮ್ಮ ಹಕ್ಕಿನಿಂದ ವಂಚಿಸಲು ನೋಡಲಾಗುತ್ತಿದೆ. ಇದಕ್ಕೆ ಬಿಜೆಪಿ […]
ತಿಹಾರ್ ಜೈಲಿನಲ್ಲಿ ಆಪ್ ನಾಯಕ ಸತ್ಯೇಂದ್ರ ಜೈನ್ ರಾಜ ದರ್ಬಾರ್: ಮಸಾಜ್ ಬಳಿಕ ಆಹಾರದ ವೀಡಿಯೋ ವೈರಲ್

ದೆಹಲಿ: ಭ್ರಷ್ಟಾಚಾರದ ಆರೋಪದಡಿ ಕಾರಾಗೃಹವಾಸದಲ್ಲಿರುವ ದೆಹಲಿ ಸರ್ಕಾರದ ಸಚಿವ ಸತ್ಯೇಂದ್ರ ಜೈನ್ ಅವರ ಕಾಲಿಗೆ ವ್ಯಕ್ತಿಯೊಬ್ಬ ಮಸಾಜ್ ಮಾಡುತ್ತಿರುವ ವೀಡಿಯೊ ಹೊರಬಿದ್ದ ನಂತರ ರಾಜಕೀಯ ವಲಯದಲ್ಲಿ ಸಂಚಲನವಾಗಿತ್ತು. ತನ್ನ ನಾಯಕನ ವೀಡಿಯೋದ ಬಗ್ಗೆ ಸ್ಪಷ್ಟೀಕರಣ ನೀಡಿದ್ದ ಆಪ್ ಪಕ್ಷ ಜೈನ್ ರವರ ಆರೋಗ್ಯದ ಕಾರಣ ನೀಡಿ ಅವರಿಗೆ ವೈದ್ಯರ ಸಲಹೆ ಮೇರೆಗೆ ಫಿಸಿಯೋಥೆರಪಿ ನೀಡಲಾಗುತ್ತಿತ್ತು ಎಂದಿತ್ತು. ಆದರೆ ಇದನ್ನು ಅಲ್ಲಗಳೆದ ಜೈಲಿನ ಅಧಿಕಾರಿಗಳು ಜೈನ್ ಅವರಿಗೆ ಮಸಾಜ್ ನೀಡುತ್ತಿದ್ದ ವ್ಯಕ್ತಿ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಯಾಗಿರುವ ಸಹಕೈದಿ […]