ಕಾಪು ಮಂಡಲ ಯುವ ಮತ್ತು ಮಹಿಳಾ ಮೋರ್ಚಾದಿಂದ ಜನಸಂಕಲ್ಪ ಸಮಾವೇಶ ಪೂರ್ವಭಾವಿ ಸಭೆ

ಉಡುಪಿ: ನ.7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ನೇತೃತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ವು ಅತ್ಯಂತ ಮಹತ್ವಪೂರ್ಣವಾಗಿದ್ದು ಬಿಜೆಪಿ ಯುವ ಮೋರ್ಚಾ, ಮಹಿಳಾ ಮೋರ್ಚಾ ಸಹಿತ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಂಘಟಿತರಾಗಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಸಾರ್ವಜನಿಕ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬದ್ಧತೆಯಿಂದ ಶ್ರಮವಹಿಸಿ, ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ […]

ನ.7ರಂದು ಕಾಪುವಿನಲ್ಲಿ ಬಿಜೆಪಿ ಜಿಲ್ಲಾ ಜನಸಂಕಲ್ಪ ಸಮಾವೇಶ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಜಿಲ್ಲಾ ಬಿಜೆಪಿ‌ ಜನಸಂಕಲ್ಪ ಸಮಾವೇಶವು‌ ನ.7ರಂದು ಬೆಳಿಗ್ಗೆ 10.30ಕ್ಕೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4ಕ್ಕೆ ಕುಂದಾಪುರ ತಾಲೂಕಿನ ತ್ರಾಸಿ‌ ಮುಳ್ಳಿಕಟ್ಟೆ ರಾ.ಹೆ. ಬಳಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಗುರುವಾರದಂದು ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ, ತ್ರಾಸಿಯಲ್ಲಿ ನಡೆಯುವ ಜನಸಂಕಲ್ಪ ಸಮಾವೇಶದ ಪೂರ್ವಭಾವಿಯಾಗಿ ಬೈಂದೂರು […]

40% ಕಮೀಷನ್ ಸರಕಾರದಿಂದ ಬೇಸತ್ತ ಜನತೆ ಕಾಂಗ್ರೆಸ್ ಗೆ ಅಧಿಕಾರ ನೀಡುವುದು ಖಚಿತ: ಎಐಸಿಸಿ ಕಾರ್ಯದರ್ಶಿ ರೋಝಿ ಜೋನ್

ಉಡುಪಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ 40% ಕಮೀಷನ್ ಸರಕಾರದಿಂದ ಜನರು ಬೇಸತ್ತಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಎಐಸಿಸಿ ಕಾರ್ಯದರ್ಶಿ, ಮೈಸೂರು ವಿಭಾಗದ ಉಸ್ತುವಾರಿ, ಕೇರಳದ ಶಾಸಕ ರೋಝಿ ಜೋನ್ ಹೇಳಿದರು. ಅವರು ಬುಧವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದ ಬಿಜೆಪಿ ಸರಕಾರ ಸಂಪೂರ್ಣ ಭ್ರಷ್ಠಾಚಾರದಲ್ಲಿ ಮುಳುಗಿದ್ದು ದೇಶದಲ್ಲಿಯೇ ಇತಿಹಾಸ ಸೃಷ್ಟಿಸಿದೆ. ಜನರು ಬದಲಾವಣೆಯನ್ನು ಬಯಸಿದ್ದು, ಪ್ರಸ್ತುತ ಸರಕಾರದಿಂದ ಜನರು ಬಹಳ […]

ಬಿಜೆಪಿ ಜಿಲ್ಲಾ ಜನಸಂಕಲ್ಪ ಸಮಾವೇಶದ ಪೂರ್ವಸಿದ್ಧತಾ ಸಭೆ

ಉಡುಪಿ: ನ.5 ರಂದು ಬೆಳಿಗ್ಗೆ 10.00ಕ್ಕೆ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಜನಸಂಕಲ್ಪ ಸಮಾವೇಶವು‌ ನ.7ರಂದು ಬೆಳಿಗ್ಗೆ 10.30ಕ್ಕೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4.00ಕ್ಕೆ ತ್ರಾಸಿ‌ ಮುಳ್ಳಿಕಟ್ಟೆ ರಾ.ಹೆ. ಬಳಿ ನಡೆಯಲಿದೆ. ಈ ಎರಡೂ ಮಹತ್ವಪೂರ್ಣ ಕಾರ್ಯಕ್ರಮಗಳ ಬಗ್ಗೆ ಪೂರ್ವಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಸಂಘಟಿತ ಪ್ರಯತ್ನದ ಮೂಲಕ ನಿರೀಕ್ಷಿತ ಯಶಸ್ಸನ್ನು ಸಾಧಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]

ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆ: 17 ಸ್ಥಾನ ಬಿಜೆಪಿ ತೆಕ್ಕೆಗೆ; ಬಹುಮತದ ಕೊರತೆ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸ್ಪಷ್ಟ ಬಹುಮತದ ಕೊರತೆ ಎದುರಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಮತ ಎಣಿಕೆ ಮುಕ್ತಾಯವಾದೆ. 35 ವಾರ್ಡ್‌ಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 10, ಎಐಎಂಐಎಂ 2 ಮತ್ತು ಜೆಡಿಎಸ್ ಅಭ್ಯರ್ಥಿ 1 ವಾರ್ಡ್‌ನಲ್ಲಿ ಚುನಾಯಿತರಾಗಿದ್ದಾರೆ ಎಂದು ಘೋಷಿಸಲಾಯಿತು. ಉಳಿದ ಐದು ವಾರ್ಡ್‌ಗಳಲ್ಲಿ ಪಕ್ಷೇತರರು ಆಯ್ಕೆಯಾಗಿದ್ದಾರೆ. ಪಕ್ಷೇತರರ ಬೆಂಬಲದೊಂದಿಗೆ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು […]