ಜಿಲ್ಲಾ ಬಿಜೆಪಿ ವತಿಯಿಂದ ವಿದೇಶಾಂಗ ರಾಜ್ಯ ಖಾತೆ ಸಚಿವ ಮುರಳೀಧರನ್ ರವರಿಗೆ ಸ್ವಾಗತ

ಉಡುಪಿ: ಕೇಂದ್ರ ಸರಕಾರದ ವಿದೇಶಾಂಗ ರಾಜ್ಯ ಖಾತೆ ಸಚಿವ ಮುರಳೀಧರನ್ ದಂಪತಿಗಳು ಭಾನುವಾರದಂದು ಉಡುಪಿಗೆ ಆಗಮಿಸಿದಾಗ ಅವರನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀಶ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ ಮತ್ತು ಜಿಲ್ಲಾ ಅಲ್ಪ ಸಂಖ್ಯಾತ ಮೋರ್ಚಾ ದಾವೂದ್ ಅಬುಬಕ್ಕರ್ ರವರು ಜಿಲ್ಲಾ ಬಿಜೆಪಿ ಪರವಾಗಿ ಮಲ್ಲಿಗೆ ಹೂವಿನ ಮಾಲೆ ಮತ್ತು ಪುಷ್ಪಗುಚ್ಛವನ್ನು ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಚಿವರ ಜತೆ ಕಾಸರಗೋಡು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಲರಾಜ್ ನಾಯಕ್, ಕಾಸರಗೋಡು ಜಿಲ್ಲಾ ಬಿಜೆಪಿ […]
ಡಾ. ವಿ.ಎಸ್. ಆಚಾರ್ಯ ಅವರ ಪುತ್ಥಳಿ ಬಳಿ ಮುಗಿಲು ಮುಟ್ಟಿದ ಕೋಟಿ ಕಂಠ ಗಾಯನ

ಮಣಿಪಾಲ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವು ಶುಕ್ರವಾರದಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಮುಂಬಾಗದಲ್ಲಿರುವ ಡಾ. ವಿ.ಎಸ್. ಆಚಾರ್ಯ ಅವರ ಪುತ್ಥಳಿ ಬಳಿ ನಡೆಯಿತು. ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಕನ್ನಡ ಶಾಲು ಮತ್ತು ಟೋಪಿಗಳನ್ನು ಧರಿಸಿ ರಾಜ್ಯ […]
ಕೊಯಮತ್ತೂರು ಸ್ಫೋಟ: ಆತ್ಮಹತ್ಯಾ ದಾಳಿ ಎಂದು ಒಪ್ಪಿಕೊಳ್ಳಿ ಎಂದ ಅಣ್ಣಾಮಲೈ; ಯುಎಪಿಎ ಹೇರಿದ ಪೊಲೀಸರು

ಕೊಯಮತ್ತೂರು: ಕೊಯಮತ್ತೂರಿನಲ್ಲಿ ಭಾನುವಾರ ಮುಂಜಾನೆ ವಾಹನದಲ್ಲಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಾಗ ವ್ಯಕ್ತಿಯೊಬ್ಬನ ಸಾವಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ ಒಂದು ದಿನದ ನಂತರ, ಐವರು ಆರೋಪಿಗಳ ವಿರುದ್ಧ ಮಂಗಳವಾರ ಕಾನೂನುಬಾಹಿರ ಚಟುವಟಿಕೆ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಹೇರಲಾಗಿದೆ ಎಂದು ಕೊಯಮತ್ತೂರು ನಗರ ಪೊಲೀಸ್ ಕಮಿಷನರ್ ವಿ ಬಾಲಕೃಷ್ಣನ್ ಹೇಳಿದ್ದಾರೆ. ಕೊಯಮತ್ತೂರು ಪೊಲೀಸರು ಬಂಧಿತ ಆರೋಪಿಗಳನ್ನು ಜಿಎಂ ನಗರದ ಮೊಹಮ್ಮದ್ ಧಾಲ್ಹಾ (25), ಮೊಹಮ್ಮದ್ ಅಜರುದ್ದೀನ್ (25), ಮೊಹಮ್ಮದ್ ರಿಯಾಜ್ (27), ಫಿರೋಜ್ ಇಸ್ಮಾಯಿಲ್ (27), ಮತ್ತು ಮೊಹಮ್ಮದ್ ನವಾಜ್ […]
ಎಸ್.ಡಿ.ಪಿ.ಐ ಕಾಂಗ್ರೆಸ್ ನ ಪಾಪದ ಕೂಸು; ಅಪಪ್ರಚಾರವೇ ಕಾಂಗ್ರೆಸ್ ಜೀವಾಳ: ಬಿಜೆಪಿ-ಎಸ್.ಡಿ.ಪಿ.ಐ ಒಳ ಒಪ್ಪಂದ ಆರೋಪಕ್ಕೆ ಕುಯಿಲಾಡಿ ತಿರುಗೇಟು

ಉಡುಪಿ: ಸಿಎಎ ವಿರುದ್ಧ ಎಸ್.ಡಿ.ಪಿ.ಐ ನಡೆಸಿದ್ದ ಪ್ರತಿಭಟನೆಯಲ್ಲಿ ಶಾಮೀಲಾಗಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರಿಗೆ ಸೋಲಿನ ಭೀತಿ ಶುರುವಾಗಿದೆ. ಮಾಜಿ ಸಿ.ಎಂ. ಸಿದ್ಧರಾಮಯ್ಯ ತನ್ನ ಆಡಳಿತಾವಧಿಯಲ್ಲಿ ನೂರಾರು ಎಸ್.ಡಿ. ಪಿ.ಐ ಕಾರ್ಯಕರ್ತರ ಪ್ರಕರಣಗಳನ್ನು ಹಿಂಪಡೆದಿದ್ದು, ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ನಡುವಿನ ಸುಮಧುರ ಬಾಂಧವ್ಯಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕೆ? ಎಸ್.ಡಿ.ಪಿ.ಐ ಕಾಂಗ್ರೆಸ್ ನ ಪಾಪದ ಕೂಸು. ಅಪಪ್ರಚಾರವೇ ಕಾಂಗ್ರೆಸ್ ಜೀವಾಳ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ನ […]
ಪಕ್ಷ ಬಲವರ್ಧನೆಗೆ ಜಿಲ್ಲೆಯಲ್ಲಿ ಬಿಜೆಪಿ ಜನ ಸಂಕಲ್ಪ ಯಾತ್ರೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಬಿಜೆಪಿ ಮಹತ್ವಾಕಾಂಕ್ಷಿ ‘ಜನ ಸಂಕಲ್ಪ ಯಾತ್ರೆ’ಯು ಉಡುಪಿ ಜಿಲ್ಲೆಯ ಬೈಂದೂರು ಮತ್ತು ಕಾಪು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನ.16 ಮತ್ತು 17ರಂದು ಮುಖ್ಯಮಂ ತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪರವರ ನೇತೃತ್ವದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಅ.19 ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]