ಜಿಲ್ಲಾ ಬಿಜೆಪಿ ವತಿಯಿಂದ ಅ.22ರಂದು ಪ.ಜಾತಿ, ಪ.ಪಂಗಡದ ಬೃಹತ್ ಸಮಾವೇಶ

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಕಲ್ಯಾಣದತ್ತ ಚಿತ್ತ ಹರಿಸಿ, ಪರಿಶಿಷ್ಟ ಜಾತಿ ಮೀಸಲಾತಿಯನ್ನು 15% ದಿಂದ 17%ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 3% ದಿಂದ 7%ಕ್ಕೆ ಏರಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಐತಿಹಾಸಿಕ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಸ್.ಸಿ. ಮತ್ತು ಎಸ್.ಟಿ. ಸಮುದಾಯದ ಮುಖಂಡರು ಅ.17 ರಂದು ಬೃಹತ್ ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಲಿದ್ದಾರೆ […]
ಕಾಂಗ್ರೆಸ್ ಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಮಹೇಶ್ ಠಾಕೂರ್

ಉಡುಪಿ: ಖಾಸಗಿ ಕಾರ್ಯಕ್ರಮದ ನಿಮಿತ್ತ ಅ.8 ರಂದು ಉಡುಪಿ ನಗರಕ್ಕೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಮಾಂಸಾಹಾರವನ್ನು ಸ್ವೀಕರಿಸಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೇಟಿ ನೀಡಿದ್ದಾರೆ ಎಂಬ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸುಳ್ಳು ಆರೋಪವನ್ನು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಸರಾಸಗಟಾಗಿ ತಳ್ಳಿಹಾಕಿದ್ದಾರೆ. ಸನಾತನ ಹಿಂದೂ ಧರ್ಮದ ಪ್ರತಿಪಾದಕ, ಈ ಮಣ್ಣಿನ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಘನತೆ ಗೌರವದ ಸಂಪೂರ್ಣ ಅರಿವುಳ್ಳ ಹಿಂದುತ್ವದ ಐಕಾನ್ ಎಂದೆನಿಸಿರುವ ಡಾ. […]
ಜಿಲ್ಲಾ ಬಿಜೆಪಿ ಕಚೇರಿಗೆ ಪ್ರಮೋದ್ ಸಾವಂತ್ ಭೇಟಿ

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶನಿವಾರದಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ಬಿಜೆಪಿ ವತಿಯಿಂದ ಪ್ರಮೋದ್ ಸಾವಂತ್ ಅವರನ್ನು ಅಭಿನಂದಿಸಲಾಯಿತು. ಇದಕ್ಕೂ ಮುನ್ನ ಅವರು ಶ್ರೀಕೃಷ್ಣಮಠಕ್ಕಾಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಪರ್ಯಾಯ ಮಠದ ದಿವಾನ ವರದರಾಜ ಭಟ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಡಾ.ಕೃಷ್ಣಪ್ರಸಾದ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ […]
ಪಡಿತರದಲ್ಲಿ ಕುಚ್ಚಲಕ್ಕಿ ವಿತರಣೆಗೆ ಕೇಂದ್ರದ ಅನುಮೋದನೆ: ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೈತರು ಬೆಳೆಯುತ್ತಿರುವ ಸ್ಥಳೀಯ ಕುಚ್ಚಲಕ್ಕಿ ಪ್ರಭೇದಗಳಾದ ಎಂಒ4, ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮ ಮತ್ತು ಅಭಿಲಾಷ್ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸಿ ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಪಡಿತರ ಮೂಲಕ ವಿತರಿಸಲು ಅನುಮತಿ ನೀಡಿರುವ ಕೇಂದ್ರ ಸರಕಾರದ ಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಉಡುಪಿ, ದ.ಕ., ಉತ್ತರ ಕನ್ನಡ ಜಿಲ್ಲೆಗಳ ಜನತೆಯ ಬೇಡಿಕೆಯಂತೆ ಕರ್ನಾಟಕ […]
ಬ್ರಹ್ಮಾವರ: ಬಿಜೆಪಿ ಗ್ರಾಮಾಂತರ ವತಿಯಿಂದ ಖಾದಿ ಮೇಳ

ಬ್ರಹ್ಮಾವರ: ಬಿಜೆಪಿಯ ಸೇವಾ ಪಾಕ್ಷಿಕ ಅಭಿಯಾನ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚಣೆ ಅಂಗವಾಗಿ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಬ್ರಹ್ಮಾವರದ ಗಾಂಧಿ ಮೈದಾನದ ಬಳಿ ಆಯೋಜಿಸಿದ್ದ ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ಖಾದಿ ಮೇಳವನ್ನು ಬಿಜೆಪಿ ಉಡುಪಿ ಗ್ರಾಮಾಂತರ ವಿಭಾಗದ ಅಧ್ಯಕ್ಷೆ ವೀಣಾ ವಿ. ನಾಯ್ಕ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸೇವಾ ಪಾಕ್ಷಿಕ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಸದಾನಂದ ಉಪ್ಪಿನಕುದ್ರು, ಬಿಜೆಪಿ ಜಿಲ್ಲಾ […]