ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದದ ಮಿಥುನ್ ರೈ ಬಾಲಿಷ ಹೇಳಿಕೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ತನ್ನ ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿರುವ ಪುಂಡ ಪುಡಾರಿ ರಾಜಕಾರಿಣಿ ಮಿಥುನ್ ರೈ ಅವರಿಗೆ ಕ್ರಿಯಾಶೀಲ ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರ ಬಗ್ಗೆ ಮಾತನಾಡಲು ಕವಡೆ ಕಾಸಿನ ಕಿಮ್ಮತ್ತೂ ಇಲ್ಲ. ತನ್ನ ಕಾರ್ಯಕ್ಷಮತೆಯಿಂದ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿರುವ ಶೋಭಾ ಕರಂದ್ಲಾಜೆಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ ಅಪ್ರಬುದ್ಧ ರಾಜಕಾರಿಣಿ ಮಿಥುನ್ ರೈ ಅವರ ಸಚಿವೆ ಶೋಭಾ ವಿರುದ್ಧ ನೀಡಿದ ಬಾಲಿಷ ಹೇಳಿಕೆ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ […]
ಪಿ.ಎಫ್.ಐ ನಿಷೇಧ ರಾಷ್ಟ್ರ ವಿರೋಧಿಗಳಿಗೆ ಪಾಠ: ನಯನಾ ಗಣೇಶ್

ಉಡುಪಿ: ದೇಶದಲ್ಲಿ ಅಶಾಂತಿ ಮತ್ತು ಮತಿಯವಾದವನ್ನು ಪ್ರತಿಪಾದಿಸಿ ದೇಶ ವಿರೋಧಿಸಿ ಕೃತ್ಯದಲ್ಲಿ ತೊಡಗಿದ್ದ ಪಿ.ಎಫ್.ಐ ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿರುವುದನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ನಯನಾ ಗಣೇಶ್ ಸ್ವಾಗತಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ದೇಶದ ಅನೇಕ ಕಡೆ ಮುಖ್ಯವಾಗಿ ಕರಾವಳಿ ಪ್ರದೇಶದಲ್ಲಿ ಹಲವು ವಿಧ್ವಂಸಕ ಚಟುವಟಿಕೆಯಲ್ಲಿ ಭಾಗಿಯಾಗಿ, ದೇಶದ ಐಕ್ಯತೆ ಗೆ ಪಿ.ಎಫ್.ಐ ಧಕ್ಕೆ ತಂದಿದ್ದು, ಭಯದ ವಾತಾವರಣ ಮೂಡಿಸುತ್ತ ಬಂದಿದೆ. ಅನೇಕ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವ ಮೂಲಕ ರಾಷ್ಟ್ರೀಯತೆಯ […]
ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಯೋಗದೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಭಾನುವಾರದಂದು ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]
ಕುಂದಾಪುರ: ಬಿಜೆಪಿ ಸೇವಾ ಪಾಕ್ಷಿಕದ ಅಂಗವಾಗಿ ಹಲವಾರು ಕಾರ್ಯಕ್ರಮ

ಕುಂದಾಪುರ: ಬಿಜೆಪಿ ಕುಂದಾಪುರ ಮಂಡಲದ ವತಿಯಿಂದ ಪ್ರಧಾನಿ ಮೋದಿ ಜನ್ಮದಿನದಿಂದ ಮಹಾತ್ಮಾ ಗಾಂಧಿಯವರ ಜನ್ಮದಿನದವರೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸೆ.17ರಂದು ರೆಡ್ ಕ್ರಾಸ್ ಸಹಕಾರದಲ್ಲಿ ರಕ್ತದಾನ ಶಿಬಿರ, ಸೆ.20ರಂದು ಮಹಿಳಾ ಮೋರ್ಚಾ ವತಿಯಿಂದ ಅಂಗನವಾಡಿ ದತ್ತು ಸ್ವೀಕಾರ ಕಾರ್ಯಕ್ರಮ, ಸೆ.22ರಂದು ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಚಿಕನ್ ಸಾಲ್ ಸ.ಪ್ರಾ.ಶಾಲಾ ವಠಾರದಲ್ಲಿ ಅರಳಿ ಗಿಡ ನೆಡುವ ಕಾರ್ಯಕ್ರಮ, ಸೆ.24ರಂದು ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆ ಸ್ವಚ್ಛತಾ ಕಾರ್ಯಕ್ರಮ, ಸೆ.25ರಂದು ಎಸ್.ಟಿ ಮೋರ್ಚಾ ಹಾಗೂ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಕುಂದಾಪುರ […]
ಪ್ರಧಾನಿ ಮೋದಿ ಜನ್ಮದಿನದಿಂದ ಮಹಾತ್ಮಾ ಗಾಂಧಿ ಜನ್ಮದಿನದವರೆಗೆ ಬಿಜೆಪಿ ಸೇವಾ ಪಾಕ್ಷಿಕ ಅಭಿಯಾನ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಅಪ್ರತಿಮ ನಾಯಕತ್ವದಲ್ಲಿ ಕೇಂದ್ರ ಸರಕಾರವು ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಕ್ಕೆ ಬದ್ಧವಾಗಿದೆ. ಸರಕಾರದ ಅನೇಕ ಜನಪರ ಯೋಜನೆಗಳನ್ನು ಸ್ವೀಕರಿಸಿ ಫಲಾನುಭವಿಗಳಾಗುವ ಮೂಲಕ ದೇಶವಾಸಿಗಳು ಇದನ್ನು ಅನುಮೋದಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ ಹೇಳಿದರು. ಅವರು ಗುರುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಸೆ.17 ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ, ಸೆ.25 ರಂದು ಪಕ್ಷದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನ, ಅ.2 ರಂದು ಮಹಾತ್ಮಾ ಗಾಂಧಿ […]