ಬಿಜೆಪಿಯ 11 ಸದಸ್ಯರ ಸಂಸದೀಯ ಮಂಡಳಿ ಪ್ರಕಟ: ನಿತಿನ್ ಗಡ್ಕರಿ, ಶಿವರಾಜ್ ಚೌಹಾಣ್ ಗಿಲ್ಲ ಅವಕಾಶ; ಬಿ.ಎಸ್.ಯಡಿಯೂರಪ್ಪ, ಬಿ.ಎಲ್ ಸಂತೋಷ್ ಗೆ ಸ್ಥಾನ

ನವದೆಹಲಿ: ಬುಧವಾರ, ಭಾರತೀಯ ಜನತಾ ಪಕ್ಷವು11 ಸದಸ್ಯರ ಸಂಸದೀಯ ಮಂಡಳಿಯನ್ನು ಘೋಷಿಸಿತು. ಹೊಸದಾಗಿ ರಚಿಸಲಾದ ಮಂಡಳಿಯು ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ನೇತೃತ್ವದಲ್ಲಿರುತ್ತದೆ ಮತ್ತು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒಳಗೊಂಡಿರುತ್ತದೆ. ಬಿಜೆಪಿಯ ನೂತನ ಸಂಸದೀಯ ಮಂಡಳಿ ಸದಸ್ಯರು ಬಿಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ ಲಕ್ಷ್ಮಣ್, ಸುಧಾ ಯಾದವ್, ಬಿಎಲ್ ಸಂತೋಷ್, ಸತ್ಯನಾರಾಯಣ್ ಜಟಿಯಾ, ಇಕ್ಬಾಲ್ ಸಿಂಗ್ ಲಾಲ್ಪುರ […]
ಅಟಲ್ ಜೀ ಮೇರು ವ್ಯಕ್ತಿತ್ವ ಮತ್ತು ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ: ಸುರೇಶ್ ನಾಯಕ್

ಉಡುಪಿ: ಶ್ರೇಷ್ಠ ಸಂಸದೀಯ ಪಟು, ಕವಿ ಹೃದಯದ, ಮೇರು ವ್ಯಕ್ತಿತ್ವದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯವರ 4ನೇ ವರ್ಷದ ಪುಣ್ಯ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಟಲ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ, ಭಾರತೀಯ ಜನ ಸಂಘದ ನಂತರ ಭಾರತೀಯ […]
ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮೆಟೆಡ್ ನೂತನ ಅಧ್ಯಕ್ಷರಾಗಿ ಕೆ.ಉದಯ ಕುಮಾರ್ ಶೆಟ್ಟಿ ಪದಗ್ರಹಣ

ಬೆಂಗಳೂರು: ಕರ್ನಾಟಕ ಸರಕಾರ ಸ್ವಾಮ್ಯದ, 77 ವರ್ಷಗಳ ಇತಿಹಾಸವಿರುವ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣ ಸಮಾರಂಭವು ಬೆಂಗಳೂರು ಯಶವಂತಪುರದ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆಯಿತು. ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡ ಜಲಸಾರಿಗೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಇವರು ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣವನ್ನು ನೆರವೇರಿಸಿ, ಅಭಿನಂದಿಸಿದರು. ಸಂಸ್ಥೆಯ ನೂತನ ಅಧ್ಯಕ್ಷರಾಗಿ ಜಬಾಬ್ದಾರಿ ಸ್ವೀಕರಿಸಿದ […]
ಮನೆ ಮನೆಗಗಳಲ್ಲಿ ತ್ರಿವರ್ಣ ಧ್ವಜ ಅಭಿಯಾನ: ಜಿಲ್ಲಾ ಬಿಜೆಪಿ ವತಿಯಿಂದ ರಾಷ್ಟ್ರಧ್ವಜ ವಿತರಣೆ

ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಹಾಗೂ ಬಿ.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೂಚನೆಯಂತೆ ‘ಮನೆ ಮನೆಗಗಳಲ್ಲಿ ತ್ರಿವರ್ಣ ಧ್ವಜ’ ಅಭಿಯಾನದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖರನ್ನು ಭೇಟಿಯಾಗಿ ರಾಷ್ಟ್ರಧ್ವಜವನ್ನು ಹಸ್ತಾಂತರಿಸಲಾಯಿತು. ಮಣಿಪಾಲ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಹೆಚ್.ಎಸ್. ಬಲ್ಲಳ್, ಉಡುಪಿ ಜಿಲ್ಲಾ ಸಂಘ ಚಾಲಕ್ ನಾರಾಯಣ ಶೆಣೈ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜನಪದ ವಿದ್ವಾಂಸ ಬನ್ನಂಜೆ ಬಾಬು […]
ಭಾರತದ 14 ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ: ಕಳೆದ ಆರು ಉಪರಾಷ್ಟ್ರಪತಿ ಚುನಾವಣೆಗಳಲ್ಲಿ ಅತ್ಯಾಧಿಕ ಅಂತರದ ಗೆಲುವು

ನವದೆಹಲಿ: ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಅಭ್ಯರ್ಥಿ ಜಗದೀಪ್ ಧನಕರ್ ಅವರು ಭಾರತದ 14 ನೇ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಧನಕರ್ 528 ಮತಗಳನ್ನು ಪಡೆದು ವಿರೋಧ ಪಕ್ಷದ ಅಭ್ಯರ್ಥಿ, 182 ಮತ ಪಡೆದ ಶ್ರೀಮತಿ ಮಾರ್ಗರೆಟ್ ಆಳ್ವ ಅವರನ್ನು ಸೋಲಿಸಿದರು. ನಿನ್ನೆ ನಡೆದ ಮತದಾನದಲ್ಲಿ ಶೇ.72.8 ರಷ್ಟು ಮಾನ್ಯವಾದ ಮತಗಳೊಂದಿಗೆ ಧನಕರ್ ಅವರ ಗೆಲುವು ಕಳೆದ ಆರು ಉಪರಾಷ್ಟ್ರಪತಿ ಚುನಾವಣೆಗಳಲ್ಲಿ ಪಡೆದ ಅತ್ಯಾಧಿಕ ಗೆಲುವಿನ ಅಂತರವಾಗಿದೆ. ಮೂಲತಃ ಲೋಕದಳ ಪಕ್ಷ ಆ ಬಳಿಕ ಕಾಂಗ್ರೆಸ್ ನಲ್ಲಿದ್ದು, ನಂತರ […]