ಉಡುಪಿ ಜಿಲ್ಲಾ ಬಿಜೆಪಿ ಸಮಿತಿಗೆ ಸದಸ್ಯರ ಆಯ್ಕೆ

ಉಡುಪಿ: ಜಿಲ್ಲೆಯಲ್ಲಿ ತೆರವಾಗಿರುವ ಮತ್ತು ಖಾಲಿ ಉಳಿದಿರುವ ಉಡುಪಿ ಜಿಲ್ಲೆಯ ಪದಾಧಿಕಾರಿಗಳನ್ನು ಭರ್ತಿ ಮಾಡಿ ಸದಸ್ಯರನ್ನು ನೇಮಕ ಮಾಡಲಾಗಿದೆ. ಜಿಲ್ಲಾಉಪಾಧ್ಯಕ್ಷರಾಗಿ ಗೀತಾಂಜಲಿ ಸುವರ್ಣ ಮತ್ತು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಆಯ್ಕೆಯಾಗಿದ್ದರೆ, ಜಿಲ್ಲಾಕಾರ್ಯದರ್ಶಿಗಳಾಗಿ ಗುರುಪ್ರಸಾದ್ ಶೆಟ್ಟಿ ಮತ್ತು ಅನಿತಾ ಶ್ರೀಧರ್ ಹಾಗೂ ಜಿಲ್ಲಾ ವಕ್ತಾರರಾಗಿ ಕೆ. ರಾಘವೇಂದ್ರ ಕಿಣಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಉಡುಪಿ: ಜು.30 ರಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಶೃದ್ಧಾಂಜಲಿ ಸಭೆ

ಉಡುಪಿ: ಬೆಳ್ಳಾರೆಯಲ್ಲಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಆವರ ಶೃದ್ಧಾಂಜಲಿ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜು.30 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದು ಪ್ರವೀಣ್ […]
ಪ್ರವೀಣ್ ಹತ್ಯೆ ಹಿನ್ನೆಲೆ: ಶಂಕಿತ ಏಳು ಎಸ್.ಡಿ.ಪಿ.ಐ ಕಾರ್ಯಕರ್ತರು ವಶಕ್ಕೆ

ಸುಳ್ಯ: ಹಿಂದೂ ಕಾರ್ಯಕರ್ತ, ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಎಸ್.ಡಿ.ಪಿ.ಐ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಂಕೆಯ ಹಿನ್ನಲೆಯಲ್ಲಿ ಏಳು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ. ತಡರಾತ್ರಿ ಕಾರ್ಯಕರ್ತರ ಮನೆಗೆ ಆಗಮಿಸಿದ ಪೊಲೀಸರು ಎಳು ಜನರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವಶಕ್ಕೆ ಪಡೆದ ಎಲ್ಲಾ ಏಳು ಕಾರ್ಯಕರ್ತರು ಬೆಳ್ಳಾರೆ ಪರಿಸರದ ನಿವಾಸಿಗಳು ಎಂದು ತಿಳಿದು ಬಂದಿದೆ. […]
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹಂತಕರನ್ನು ಎನ್ಕೌಂಟರ್ ಮಾಡಲು ಆಗ್ರಹಿಸಿದ ಕುಯಿಲಾಡಿ; ಜಿಹಾದಿಗಳಿಗೆ ಅವರದ್ದೇ ಭಾಷೆಯಲ್ಲಿ ಉತ್ತರಿಸಿ ಎಂದ ಯಶಪಾಲ್ ಸುವರ್ಣ

ಉಡುಪಿ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಹಂತಕರನ್ನು ಶೀಘ್ರ ಪತ್ತೆ ಹಚ್ಚಿ ಕಾನೂನಾತ್ಮಕ ಉಗ್ರ ಶಿಕ್ಷೆಗೆ ಒಳಪಡಿಸುವ ಜೊತೆಗೆ ಹಂತಕರ ಹಿಂದಿರುವ ಸಂಘಟನೆಯನ್ನು ಪತ್ತೆ ಹಚ್ಚಿ ರೂವಾರಿ ಜಿಹಾದಿಗಳನ್ನು ಹೈದರಾಬಾದ್ ಮಾದರಿಯಲ್ಲಿ ಎನ್ಕೌಂಟರ್ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಶಿವಮೊಗ್ಗದ ಹರ್ಷ ಹತ್ಯೆಯ ಬಳಿಕ ಇದೀಗ ನಡೆದಿರುವ ಪ್ರವೀಣ್ ನೆಟ್ಟಾರು ಕಗ್ಗೊಲೆ ರಾಜ್ಯ ಗೃಹ ಖಾತೆಗೆ ಸವಾಲಾಗಿ […]
ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನ ಅಧ್ಯಕ್ಷರಾಗಿ ಕೆ.ಉದಯ ಕುಮಾರ್ ಶೆಟ್ಟಿ ನೇಮಕ

ಉಡುಪಿ: ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನ ಅಧ್ಯಕ್ಷರಾಗಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿಯೂ ಇವರು ಸೇವೆ ಸಲ್ಲಿಸಿದ್ದಾರೆ. ಕಳೆದ ಎರಡು ದಶಕಗಳಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ