ಜಮ್ಮು-ಕಾಶ್ಮೀರದ 370ನೇ ವಿಧಿ ರದ್ದತಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರಿಗೆ ಸಂದ ಅರ್ಥಪೂರ್ಣ ಶೃದ್ಧಾಂಜಲಿ: ಕೆ.ಉದಯ ಕುಮಾರ್ ಶೆಟ್ಟಿ

ಉಡುಪಿ: ‘ಏಕ್ ದೇಶ್ ಮೆ ದೊ ವಿಧಾನ್, ದೊ ಪ್ರಧಾನ್ ಔರ್ ದೊ ನಿಶಾನ್ ನಹೀ ಚಲೇಗಾ’ ಎಂಬ ಘೋಷಣೆಯೊಂದಿಗೆ ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣ ವಿಲೀನಗೊಳಿಸುವ ಬೇಡಿಕೆಯೊಂದಿಗೆ ಸತ್ಯಾಗ್ರಹ, ಹೋರಾಟಗಳ ಮೂಲಕ ಅಖಂಡ ಭಾರತಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ ಬಲಿದಾನಗೈದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನಾದರ್ಶ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನೇತೃತ್ವದಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನದ 370ನೇ ವಿಧಿಯ ರದ್ದತಿಯಾಗಿರುವುದು ಡಾ. ಶ್ಯಾಮಪ್ರಸಾದ್ ಮುಖರ್ಜಿಯವರಿಗೆ ಸಂದ ಅರ್ಥಪೂರ್ಣ […]

ಗಡಿಯಲ್ಲಿ ತಂಟೆ ಎಬ್ಬಿಸುವ ನೆರೆ ರಾಷ್ಟ್ರಗಳಿಗೆ ಸೂಕ್ತ ಉತ್ತರ ನೀಡಲು ಅಗ್ನಿಪಥ್ ಯೋಜನೆ ಜಾರಿ: ಡಾ. ಭರತ್ ವೈ ಶೆಟ್ಟಿ

ಮಂಗಳೂರು: ಗಡಿಯಲ್ಲಿ ನಿತ್ಯವೂ ತಂಟೆ ಎಬ್ಬಿಸುವ ನೆರೆ ರಾಷ್ಟ್ರಗಳಾದ ಚೀನಾ ಮತ್ತು ಪಾಕಿಸ್ತಾನಗಳಿಗೆ ಸೂಕ್ತ ಉತ್ತರ ನೀಡಲು ಸೇನೆಯಲ್ಲಿ ಮಹತ್ವದ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದು ಅಸಂಖ್ಯ ಯುವಕರಲ್ಲಿ ಶಿಸ್ತು, ಸಂಯಮ, ಉತ್ತಮ ಭವಿಷ್ಯ ಮತ್ತು ಉದ್ಯೋಗಾವಕಾಶಕ್ಕೆ ಪೂರಕವಾಗಲಿದೆ. ಪಕ್ಷದ ಕಾರ್ಯಕರ್ತರು ಯುವ ಸಮುದಾಯಕ್ಕೆ ಸರಿಯಾದ ಮಾಹಿತಿ ನೀಡುವ ಮೂಲಕ ಯೋಜನೆಯನ್ನು ಬೆಂಬಲಿಸುವಂತೆ ಪ್ರೇರೇಪಿಸಬೇಕು ಎಂದು ಶಾಸಕ ಡಾ ಭರತ್ ವೈ ಶೆಟ್ಟಿ ಹೇಳಿದರು. ಜನತಾ ಕಾಲನಿ ಬಿಜೆಪಿ ಶಕ್ತಿಕೇಂದ್ರ ಆಯೋಜಿಸಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, […]

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಜೆ. ಪಿ. ನಡ್ಡಾಗೆ ಸನ್ಮಾನ

ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಜೆ. ಪಿ. ನಡ್ಡಾರಿಗೆ ಬೆಳ್ಳಿಯ ದೋಣಿಯ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಸನ್ಮಾನ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ […]

ಎಂ ಎಲ್ ಸಿ ಚುನಾವಣೆ : ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು

ಬೆಂಗಳೂರು: ಕರ್ನಾಟಕದ ಪಶ್ಚಿಮ ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಎಂಎಲ್‌ಸಿ ಚುನಾವಣೆಯಲ್ಲಿ ಸತತ 8 ಬಾರಿ ಗೆದ್ದ ದೇಶದ ಮೊದಲ ಎಂಎಲ್‌ಸಿ ಎನ್ನುವ ಹೆಗ್ಗಳಿಕೆಗೆ ಹೊರಟ್ಟಿ ಪಾತ್ರವಾಗಿದ್ದಾರೆ. ಇನ್ನೂ 3 ಸ್ಥಾನಗಳಿಗೆ ಕೌಟಿಂಗ್ ನಡೆಯುತ್ತಿದ್ದು, ಕರ್ನಾಟಕದ ಮೇಲ್ಮನೆಯಲ್ಲಿ ಬಿಜೆಪಿ ಬಹುಮತದತ್ತ ಸಾಗುತ್ತಿದೆ.  

ಕರಾವಳಿ ಕರ್ನಾಟಕದ ರಾಜಕೀಯ ಭೀಷ್ಮ; ಬಿಜೆಪಿಯ ಹಿರಿಯ ಮುತ್ಸದಿ ಎ.ಜಿ. ಕೊಡ್ಗಿ ನಿಧನ: ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಉಡುಪಿ : 12 ವರ್ಷಗಳ ಕಾಲ ಬೈಂದೂರಿನ ಶಾಸಕರಾಗಿ, ರಾಜ್ಯ 3ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ, ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ, ಪ್ರಗತಿಪರ ಕೃಷಿಕ, ಉಡುಪಿ ಜಿಲ್ಲಾ ಬಿಜೆಪಿಯ ಪ್ರಥಮ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಅಮೂಲ್ಯ ಕೊಡುಗೆ ನೀಡಿರುವ ಕರಾವಳಿ ಕರ್ನಾಟಕದ ರಾಜಕೀಯ ಭೀಷ್ಮರೆಂದೇ ಖ್ಯಾತರಾಗಿದ್ದ ಎ.ಜಿ. ಕೊಡ್ಗಿ (93 ವರ್ಷ) ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ. […]