ಆರ್.ಎಸ್.ಎಸ್ ಸಮವಸ್ತ್ರ ಸುಡುವ ಅಭಿಯಾನ: ಸಿದ್ದರಾಮಯ್ಯ ಹೇಳಿಕೆ ಖಂಡಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್

ಉಡುಪಿ: ಜಗತ್ತಿನ ಅತೀ ದೊಡ್ಡ ಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಮವಸ್ತ್ರ ಸುಡುವ ಅಭಿಯಾನ ಆರಂಭಿಸುವ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್ ಖಂಡಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಳೆದ 97 ವರ್ಷಗಳಿಂದ ಸಾಮಾಜಿಕ ಸಂಘಟನೆಯಾಗಿ ಸಮಾಜದಲ್ಲಿ ಸಮರ್ಪಣಾ ಭಾವದಿಂದ ಕೆಲಸ ಮಾಡುತ್ತ ಬಂದಿದೆ. ದೇಶದ ಸಂಕಷ್ಟ ಸಮಯದಲ್ಲಿ, ಪ್ರಾಕೃತಿಕ ಅವಘಡಗಳಾದಾಗ ಮತ್ತು ಕೊರೊನಾದಂತಹ ಪರಿಸ್ಥಿತಿಗಳಲ್ಲಿ ಜೀವದ ಹಂಗು ತೊರೆದು ಸಂಘದ ಸ್ವಯಂ ಸೇವಕರು ಸೇವೆ […]
ತಮಿಳುನಾಡಿನಲ್ಲಿ ಇಂಧನ ಬೆಲೆ ವಿರುದ್ದ ಪ್ರತಿಭಟನೆ: ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ದ ಪ್ರಕರಣ ದಾಖಲು

ಚೆನ್ನೈ: ತಮಿಳುನಾಡಿನ ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಅನುಮತಿ ಪಡೆಯದೆ ರಾಜ್ಯ ಸಚಿವಾಲಯದತ್ತ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕೆಂದು ರಾಜು ಬಿಜೆಪಿ ಒತ್ತಾಯಿಸುತ್ತಿದೆ. ಅಣ್ಣಾಮಲೈ ಮತ್ತು 5,000 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ತಮಿಳುನಾಡು ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. ಮೇ 31 ರಂದು ಅಣ್ಣಾಮಲೈ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾ ರಾಜ್ಯದ […]
ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಅಂಗನವಾಡಿ ಕೇಂದ್ರಕ್ಕೆ ಚಾಪೆ, ಕುರ್ಚಿ ವಿತರಣೆ

ಉಡುಪಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಅಂಗವಾಗಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ನೇತೃತ್ವದಲ್ಲಿ ಉಡುಪಿ ಒಳಕಾಡು ವಾರ್ಡಿನ ಬೀಡಿನಗುಡ್ಡೆಯ ಪರಿಸರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಚಾಪೆ ಮತ್ತು ಕುರ್ಚಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಉಪಾಧ್ಯಕ್ಷೆ […]
ಜೂನ್ 2 ರಂದು ಬಿಜೆಪಿ ಸೇರಲಿದ್ದಾರೆ ಮಾಜಿ ಕಾಂಗ್ರೆಸಿಗ ಹಾರ್ದಿಕ್ ಪಟೇಲ್

ನವದೆಹಲಿ: ಮಾಜಿ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ತಾನು ಜೂನ್ 2 ರಂದು ಬಿಜೆಪಿ ಸೇರುವುದಾಗಿ ಮಂಗಳವಾರ ಖಚಿತಪಡಿಸಿದ್ದಾರೆ. ರಾಜ್ಯಾಧ್ಯಕ್ಷ ಸಿಆರ್ ಪಾಟೀಲ್ ಸಮ್ಮುಖದಲ್ಲಿ ಹಾರ್ದಿಕ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಬಿಜೆಪಿ ನಾಯಕರೊಬ್ಬರು ಖಚಿತಪಡಿಸಿದ್ದಾರೆ ಎನ್ನಲಾಗಿದೆ. ಗುಜರಾತಿನಲ್ಲಿ ಪಾಟಿದಾರ್ ಕೋಟಾ ಆಂದೋಲನವನ್ನು ಮುನ್ನಡೆಸುವ ಮೂಲಕ ಪ್ರಾಮುಖ್ಯತೆ ಪಡೆದಿದ್ದ ಮಾಜಿ ಕಾಂಗ್ರೆಸಿಗ ಪಟೇಲ್ ಇತ್ತೀಚೆಗಷ್ಟೆ ಕೈ ಗೆ ಗುಡ್ ಬೈ ಹೇಳಿದ್ದರು. 2019 ರಲ್ಲಿ ಕಾಂಗ್ರೆಸ್‌ಗೆ ಸೇರಿದ್ದ 28 ವರ್ಷದ ಪಟೇಲ್, ಪಕ್ಷ ತೊರೆಯುವ ಮುನ್ನ […]
ದೇಶದಲ್ಲಿ ಒಂದಲ್ಲ ಒಂದು ದಿನ ಏಕರೂಪ ನಾಗರಿಕ ಸಂಹಿತೆ ಜಾರಿ: ಕೋಟ ಶ್ರೀನಿವಾಸ ಪೂಜಾರಿ

ಕೊಪ್ಪಳ: ಏಕರೂಪ ನಾಗರಿಕ ಸಂಹಿತೆ ಒಂದಲ್ಲ ಒಂದು ದಿನ ದೇಶದಲ್ಲಿ ಜಾರಿಯಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಹೇಳಿದ್ದಾರೆ. “ಏಕರೂಪ ನಾಗರಿಕ ಸಂಹಿತೆ ತರಲು ಬಿಜೆಪಿ ಬದ್ಧವಾಗಿದೆ ಮತ್ತು ಅದನ್ನು ಜಾರಿಗೆ ತರಲು ಹೊರಟಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ್ದು ಬಿಜೆಪಿ”. ಬಿಜೆಪಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಿದೆ ಎಂದ ಅವರು, “ಕಾನೂನು ಎಲ್ಲ ನಾಗರಿಕರಿಗೂ ಸಮಾನವಾಗಿರಬೇಕು ಎಂಬುದು ಪಕ್ಷದ ನಿಲುವು ಪ್ರಸ್ತುತ ಯಾವುದೇ ಕೋಮು […]