ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ; ವರಿಷ್ಠರ ನಿರ್ಧಾರವೆ ಅಂತಿಮ: ಕುಯಿಲಾಡಿ

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಸೇರ್ಪಡೆ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಿ ರಾಜ್ಯ ವರಿಷ್ಠರಿಗೆ ಸಲ್ಲಿಸಲಾಗಿದ್ದು ಇನ್ನು ಮುಂದಿನ ನಿರ್ಧಾರ ಅವರಿಗೆ ಬಿಟ್ಟಿದ್ದು, ಪ್ರಮೋದ್ ಪಕ್ಷ ಸೇರ್ಪಡೆಯಾಗಲು ಯಾವುದೇ ಹುದ್ದೆಯ ಷರತ್ತು ಹಾಕಿಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ ಪಕ್ಷದ ಸಿದ್ದಾಂತವನ್ನು ನಂಬಿ ಬರುವವರಿಗೆ ಪಕ್ಷದ ಬಾಗಿಲು ಯಾವತ್ತೂ ಮುಚ್ಚಿಲ್ಲ, ಯಾವುದೇ ಹುದ್ದೆಯ ನಿರೀಕ್ಷೆಯಿಲ್ಲದೆ ಬರುವ ಇಂಗಿತವನ್ನು […]
ಪಿಎಸ್ಐ ಪರೀಕ್ಷೆ ಅಕ್ರಮ: ಶಾಸಕ ಪ್ರಿಯಾಂಕ್ ಖರ್ಗೆ ಬಂಧಿಸಿ ತನಿಖೆ ನಡೆಸುವಂತೆ ಕುಯಿಲಾಡಿ ಆಗ್ರಹ

ಉಡುಪಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ತನ್ನ ಬಳಿ ಇದ್ದ ಆಡಿಯೋವನ್ನು ವಿಳಂಬವಾಗಿ ಬಿಡುಗಡೆ ಮಾಡಿದ ಮರ್ಮ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಕಲೆಹಾಕುವ ನಿಟ್ಟಿನಲ್ಲಿ ಸಿಐಡಿ ವಿಶೇಷ ಘಟಕಕ್ಕೆ ಸಹಕರಿಸದಿದ್ದಲ್ಲಿ ಪ್ರಿಯಾಂಕ್ ಖರ್ಗೆಯವರನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸರಕಾರವನ್ನು ಆಗ್ರಹಿಸಿದ್ದಾರೆ. ಸದ್ರಿ ಪ್ರಕರಣದಲ್ಲಿ ಕಾಂಗ್ರೆಸ್ ವಿನಾಕಾರಣ ಬಿಜೆಪಿ ಮೇಲೆ ಗೂಬೆ ಕೂರಿಸುವ ವಿಫಲ ಯತ್ನದಲ್ಲಿದೆ. […]
ಮಂಜುನಾಥ ಭಂಡಾರಿ ಹೇಳಿಕೆ ದೆವ್ವದ ಬಾಯಲ್ಲಿ ಭಗವದ್ಗೀತೆ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಸ್ವಾತಂತ್ರ್ಯಾ ನಂತರ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷವು ಬ್ರಹ್ಮಾಂಡ ಭ್ರಷ್ಟಾಚಾರಗೈದಿರುವುದನ್ನು ಮರೆತು ಕಾಂಗ್ರೆಸ್ ಮುಖಂಡ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರು ಬಿಜೆಪಿ ಬಗ್ಗೆ ಲಘುವಾಗಿ ಮಾತನಾಡಿರುವುದು ದೆವ್ವದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ರಾಜ್ಯ ಬಿಜೆಪಿ ಪ್ರಭಾವಿ ಹುದ್ದೆಗೆ ಸುನಿಲ್ ಕುಮಾರ್?

ಬೆಂಗಳೂರು: ರಾಜ್ಯ ಬಿಜೆಪಿಯ ಅತ್ಯಂತ ಪ್ರಭಾವಿ ಹುದ್ದೆಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶಾಸಕ, ವಿಧಾನ ಸಭೆಯ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್ ಅವರ ಹೆಸರು ಕೇಳಿಬಂದಿದೆ ಎನ್ನಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅನಂತರದ ಪ್ರಮುಖ ಹುದ್ದೆ ಇದಾಗಿದ್ದು, ಸುನಿಲ್ ಸೇರ್ಪಡೆಗೆ ಸಂಘಪರಿವಾರ, ಸಿಎಂ ಯಡಿಯೂರಪ್ಪ ಸೇರಿದಂತೆ ಪಕ್ಷದ ಪ್ರಮುಖರೂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ ಪ್ರಕ್ರಿಯೆಯನ್ನ ನಳಿನ್ ಕುಮಾರ್ ಕಟೀಲ್ ಈಗಾಗಲೇ ಆರಂಭಿಸಿದ್ದು ಅದ್ರಲ್ಲಿ ಪ್ರಭಾವಿ ಹುದ್ದೆಗೆ […]
ಸಿದ್ಧರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಶೋಭಾ

ಉಡುಪಿ: ಅಧಿಕಾರ ಕಳೆದುಕೊಂಡ ಅನಂತರ ಮಾಜಿ ಸಿಎಂ ಸಿದ್ದರಾಮಯ್ಯನವರು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು. ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಬ್ಲಾಕ್ ಮೇಲ್ ಮಾಡಿ ವಿಪಕ್ಷದ ನಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಅವರಿಗೆ ಯಾವುದೇ ಹಿಡಿತ ಇಲ್ಲ ಎಂದು ಲೇವಡಿ ಮಾಡಿದರು. ಪ್ರಸ್ತುತ ಕಾಂಗ್ರೆಸ್‌ನಲ್ಲಿ ಅನೇಕ ಬಣಗಳು ಹುಟ್ಟಿಕೊಂಡಿವೆ. ಸಿದ್ದರಾಮಯ್ಯ ಬಣ, ಜೆಡಿಎಸ್ ವಲಸಿಗರ ಬಣ, ಪರಮೇಶ್ವರ್ ಬಣ ಹಾಗೂ ಡಿ.ಕೆ. ಶಿವಕುಮಾರ್ ಬಣ ಹೀಗೆ ಹಲವು […]