ಕಣದಿಂದ ಹಿಂದೆ ಸರಿದ ಶೋಭಾ: ಯಶ್ ಪಾಲ್ ಸುವರ್ಣಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಖಚಿತ.?

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸುವ ಕುರಿತಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಜೆಪಿ ಹೈಕಮಾಂಡ್ ಯುವ ಮುಖಂಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಹಾಲಿ ಸಂಸದೆ ಹಾಗೂ ಪ್ರಬಲ ಟಿಕೆಟ್ ಆಕಾಂಕ್ಷಿಯೂ ಆಗಿದ್ದ ಶೋಭಾ ಕರಂದ್ಲಾಜೆ ಸ್ಪರ್ಧೆಯಿಂದ ಹಿಂದೆ ಸರಿಯುವ ಎಲ್ಲಾ ಲಕ್ಷಣಗಳು ಕಂಡುಬಂದಿದ್ದು, ಅವರಿಗೆ ಹೈಕಮಾಂಡ್ ರಾಜ್ಯಮಟ್ಟದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯಶ್ […]
ಹೆಣ್ಣಾಗಿ ಹುಟ್ಟಿರುವುದಕ್ಕೆ ಹೆಮ್ಮೆಯಿದೆ: ಡಾ| ವಿಜಯಲಕ್ಷ್ಮೀ

ಕುಂದಾಪುರ: ಹೆಣ್ಣು ಸಂಸಾರದ ಕಣ್ಣು. ತಮ್ಮ ಜೀವನದಲ್ಲಿ ಎದುರಾದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಪ್ರತಿಯೊಬ್ಬ ಮಹಿಳೆ ಕೂಡ ಸಾಧಕಿಯೇ. ಹೆಣ್ಣಾಗಿ ಹುಟ್ಟಿರುವುದಕ್ಕೆ ಹೆಮ್ಮೆಯಿದೆ ಎಂದು ಡಾ| ವಿಜಯಲಕ್ಷ್ಮೀ ಹೇಳಿದರು. ಅವರು ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರದ ವತಿಯಿಂದ ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗುಣರತ್ನಾ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರನ್ನು ಗುರುತಿಸಿ […]
ಜವಾಬ್ದಾರಿ ನೀಡಿದ ಹುದ್ದೆಗಳಿಗೆ ನ್ಯಾಯ ಸಲ್ಲಿಸುವುದು ಪಕ್ಷದ ಕಾರ್ಯಕರ್ತನ ಆದ್ಯ ಕರ್ತವ್ಯ: ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷದ ವರಿಷ್ಠರು ಭರದ ತಯಾರಿ ನಡೆಸಿದ್ದು ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರಲು ಅನೇಕ ಯೋಜನೆಗಳನ್ನು ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪಕ್ಷದಲ್ಲಿರುವ ಎಲ್ಲ ನಿಷ್ಠಾವಂತ ಕಾರ್ಯಕರ್ತರಿಗೆ ಅವರವರ ಅರ್ಹತೆಗೆ ತಕ್ಕಂತೆ ವಿವಿಧ ಸ್ಥರಗಳಲ್ಲಿ ಜವಾಬ್ದಾರಿಗಳನ್ನು ನೀಡಿದ್ದು ಪಕ್ಷದ ಯೋಜನೆಗಳನ್ನು ಶಿರಸಾ ಕಾರ್ಯರೂಪಕ್ಕೆ ತರುವುದು ಅವರ ಕರ್ತವ್ಯವಾಗಿರುತ್ತದೆ ಮತ್ತು ಪಾಲಿಸುವಲ್ಲಿ ತನ್ನ ಕೆಳಸ್ತರದ ಕಾರ್ಯಕರ್ತರಿಗೆ ಪ್ರೇರೇಪಣೆಯಾಗಿ ನಿಲ್ಲುವುದು ಕೂಡ ಅಗತ್ಯವಾಗಿರುತ್ತದೆ ಎಂದು ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಮತ್ತು ಉಡುಪಿ ಚಿಕ್ಕಮಗಳೂರು ಲೋಕಸಭಾ […]
ಹಣೆಗೆ ಕುಂಕುಮ ಹಾಕಿದವರೆಲ್ಲರೂ ಸಿದ್ದರಾಮಯ್ಯರಿಗೆ ಭಯೋತ್ಪಾದಕರಂತೆ ಕಾಣುತ್ತಾರೆ: ಕೋಟ ವ್ಯಂಗ್ಯ

ಉಡುಪಿ: ಹಣೆಗೆ ಕುಂಕುಮ ಹಾಕಿದವರೆಲ್ಲರೂ ಸಿದ್ದರಾಮಯ್ಯ ಅವರಿಗೆ ಭಯೋತ್ಪಾದಕರಂತೆ ಕಾಣುತ್ತಿದ್ದಾರೆ, ಅಂತಹ ಸಿದ್ದರಾಮಯ್ಯ ಅವರ ಹೇಳಿಕೆಗೆಲ್ಲಾ ನಾವು ಪ್ರತಿಕ್ರಿಯೆ ನೀಡಬೇಕಾಗಿಲ್ಲ ಎಂದು ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾವಿ, ನಾಮ ಧರಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಟೀಕೆಗೆ ಉತ್ತರಿಸಿದ ಕೋಟ ಅವರು, ಯೋಗಿ ಆದಿತ್ಯನಾತ್ ಅವರು ಸಿಎಂ ಆಗಿ ಮಾಡಿರುವ ಕೆಲಸವನ್ನು ದೇಶವೇ ಮೆಚ್ಚುತ್ತಿದೆ. ಅಂತಹ ರಾಷ್ಟ್ರಭಕ್ತನ ಅವಹೇಳನ ಮಾಡಿದ್ರೆ […]
ಭಾರತೀಯ ಸೇನೆಯಿಂದ ಉಗ್ರರ ತಾಣ ನಾಶ, ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ

ಉಡುಪಿ: ಪುಲ್ವಾಮಾ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ವೈಮಾನಿಕ ದಾಳಿ ನಡೆಸಿ ಉಗ್ರರ ತಾಣಗಳನ್ನು ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯೆ ಶ್ಯಾಮಲ ಕುಂದರ್ ಮಾತನಾಡಿ, ಉಗ್ರರ ತಾಣಗಳನ್ನು ಧ್ವಂಸ ಮಾಡುವ ಮೂಲಕ ಭಾರತ ಸಾಮರ್ಥ್ಯ ಏನೆಂಬುವುದನ್ನು ನಮ್ಮ ಸೈನಿಕರು ಪಾಕಿಸ್ತಾನಕ್ಕೆ ತೋರಿಸಿಕೊಟ್ಟಿದ್ದಾರೆ. ಇನ್ನಾದರೂ ಪಾಕಿಸ್ತಾನ ಉಗ್ರರರಿಗೆ ಬೆಂಬಲ ನೀಡುವುದನ್ನು […]