ಬಿಜೆಪಿಗೆ ಮತ ನೀಡಿದ್ದೇ sslcಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸ್ಥಾನ ಕುಸಿಯಲು ಕಾರಣ: ಸಚಿವ ರೇವಣ್ಣ

ಹಾಸನ: ಉಡುಪಿ- ದಕ್ಷಿಣ ಕನ್ನಡದವರು ಬಿಜೆಪಿಯವರಿಗೆ ಮತಹಾಕಿದ್ದಾರೆ. ಇದಕ್ಕಾಗಿ ಅವರ ಸ್ಥಾನ ಕುಸಿದಿದೆ. ಜಾತ್ಯತೀತರಿಗೆ ಅವರು ವೋಟ್ ಹಾಕಿದ್ದರೆ ಮೊದಲನೆಯ ಸ್ಥಾನ ಬರುತ್ತಿತ್ತು. ಅವರು ಶಿಕ್ಷಣಕ್ಕೆ ಒತ್ತು ನೀಡುತ್ತಿಲ್ಲ ಎನ್ನುವುದಕ್ಕೆ ಇದೇ ಉದಾಹರಣೆ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ವಿವಾದದ ಕಿಡಿ ಹೊತ್ತಿಸಿದ್ದಾರೆ. ಪ್ರತಿ ಬಾರಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಮೊದಲ ಅಥವಾ ಎರಡನೆಯ ಸ್ಥಾನ ಪಡೆದುಕೊಳ್ಳುತ್ತಿದ್ದ ಉಡುಪಿ ಜಿಲ್ಲೆಯು ಈ ಬಾರಿ ಐದನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ವ್ಯಂಗ್ಯವಾಡಿದ್ದಾರೆ. ಹಾಸನ ಜಿಲ್ಲೆಯು ಎಸ್ ಎಸ್ ಎಲ್ […]
ಬಿಜೆಪಿ ಪರ ದೀಪಿಕಾ-ರಣ್ವೀರ್ ಪ್ರಚಾರ: ಫೋಟೊ ವೈರಲ್

ಮುಂಬೈ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಜಕೀಯ ಮುಖಂಡರು ಅಬ್ಬರದ ಪ್ರಚಾರ ನಡೆಯುತ್ತಿದ್ದು, ಸಿನಿಮಾ ಕಲಾವಿದರು ಇದಕ್ಕೆ ಸಾಥ್ ನೀಡಿದ್ದಾರೆ. ಕಳೆದೆರಡು ದಿನಗಳಿಂದ ಬಾಲಿವುಡ್ ಕ್ಯೂಟ್ ಜೋಡಿ ರಣ್ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಬಿಜೆಪಿ ಶಾಲು ಹಾಕಿಕೊಂಡಿರುವ ಫೋಟೋ ವೈರಲ್ ಆಗಿದೆ. ಏಕ್ ಬಿಹಾರಿ ಸೌ ಪೆ ಬಿಹಾರಿ ಎಂಬ ಫೇಸ್ಬುಕ್ ಖಾತೆಯಲ್ಲಿ ರಣ್ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಶಾಲು ಹಾಕಿಕೊಂಡಿರುವ ಫೋಟೋ ಅಪ್ಲೋಡ್ ಮಾಡಲಾಗಿದೆ. ಶಾಲ್ ಮೇಲೆ ‘ವೋಟ್ ಫಾರ್ […]
ಪಕ್ಷದ ಟೀಶರ್ಟ್ ವಿತರಿಸುತ್ತಿದ್ದ ಮರ್ಸಿಡೆಸ್ ಬೆಂಝ್ ಕಾರ್ ವಶ

ಉಡುಪಿ: ಅನುಮತಿ ಇಲ್ಲದೇ ಬಿಜೆಪಿ ಪಕ್ಷದ ಟೀಶರ್ಟ್ಗಳನ್ನು ತಂದು ವಿತರಿಸುತ್ತಿದ್ದ ಮರ್ಸಿಡೆಸ್ ಬೆಂಝ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶುಕ್ರವಾರ ಉಡುಪಿಯಲ್ಲಿ ನಡೆದ ಬಿಜೆಪಿ ಪಕ್ಷದ ಸೈಕಲ್ ಜಾಥಾ ಪ್ರಾರಂಭ ಸಂದರ್ಭದಲ್ಲಿ, ಬನ್ನಂಜೆ ಸಮೀಪ ಅನುಮತಿ ಇಲ್ಲದೇ ಕಾರಿನಲ್ಲಿ ಟೀಶರ್ಟ್, ಟೋಪಿ ತಂದು ವಿತರಿಸಲಾಗುತಿತ್ತು. ಈ ಸಂದರ್ಭದಲ್ಲಿ ಚುನಾವಣಾ ತಪಾಸಣಾ ತಂಡದ ಅಧಿಕಾರಿಗಳು ದಾಳಿ ನಡೆಸಿ, ಸೊತ್ತುಗಳನ್ನು ಮತ್ತು ಕಾರನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ ತಂಡದ ಅಧಿಕಾರಿ ನಾಗರಾಜ್ ಅವರು ಈ ಸಂಬಂಧ ಉಡುಪಿ […]
ಕಣದಿಂದ ಹಿಂದೆ ಸರಿದ ಶೋಭಾ: ಯಶ್ ಪಾಲ್ ಸುವರ್ಣಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಖಚಿತ.?

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸುವ ಕುರಿತಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಜೆಪಿ ಹೈಕಮಾಂಡ್ ಯುವ ಮುಖಂಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಹಾಲಿ ಸಂಸದೆ ಹಾಗೂ ಪ್ರಬಲ ಟಿಕೆಟ್ ಆಕಾಂಕ್ಷಿಯೂ ಆಗಿದ್ದ ಶೋಭಾ ಕರಂದ್ಲಾಜೆ ಸ್ಪರ್ಧೆಯಿಂದ ಹಿಂದೆ ಸರಿಯುವ ಎಲ್ಲಾ ಲಕ್ಷಣಗಳು ಕಂಡುಬಂದಿದ್ದು, ಅವರಿಗೆ ಹೈಕಮಾಂಡ್ ರಾಜ್ಯಮಟ್ಟದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯಶ್ […]
ಹೆಣ್ಣಾಗಿ ಹುಟ್ಟಿರುವುದಕ್ಕೆ ಹೆಮ್ಮೆಯಿದೆ: ಡಾ| ವಿಜಯಲಕ್ಷ್ಮೀ

ಕುಂದಾಪುರ: ಹೆಣ್ಣು ಸಂಸಾರದ ಕಣ್ಣು. ತಮ್ಮ ಜೀವನದಲ್ಲಿ ಎದುರಾದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಪ್ರತಿಯೊಬ್ಬ ಮಹಿಳೆ ಕೂಡ ಸಾಧಕಿಯೇ. ಹೆಣ್ಣಾಗಿ ಹುಟ್ಟಿರುವುದಕ್ಕೆ ಹೆಮ್ಮೆಯಿದೆ ಎಂದು ಡಾ| ವಿಜಯಲಕ್ಷ್ಮೀ ಹೇಳಿದರು. ಅವರು ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರದ ವತಿಯಿಂದ ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗುಣರತ್ನಾ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರನ್ನು ಗುರುತಿಸಿ […]