ಪ್ರತ್ಯೇಕ ಮೀನುಗಾರಿಕಾ ಸಚಿವಾಲಯ; ಅಮಿತ್ ಶಾಗೆ ಬೆಂಗಳೂರಿನಲ್ಲಿ ಸನ್ಮಾನ

ಉಡುಪಿ: ಮೀನುಗಾರರ ಬಹುದಶಕಗಳ ಬೇಡಿಕೆಯಾಗಿದ್ದ ಪತ್ಯೇಕ ಮೀನುಗಾರಿಕಾ ಸಚಿವಾಲಯದ ಮನವಿಗೆ ಸ್ಪಂದಿಸಿ ಈ ಬಾರಿ ಬಜೆಟ್ನಲ್ಲಿ ಘೋಷಿಸಿದ ಕೇಂದ್ರ ಸರಕಾರದ ಪರವಾಗಿ ಭಾರತೀಯಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ರವರನ್ನು ಅಖಿಲ ಭಾರತೀಯ ಮೀನುಗಾರರ ವೇದಿಕೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಅಖಿಲ ಭಾರತ ಮೀನುಗಾರರ ವೇದಿಕೆಯ ನೇತೃತ್ವದಲ್ಲಿಕೇಂದ್ರ ಸರಕಾರಕ್ಕೆ ಮೀನುಗಾರರ ವಿವಿಧ ಬೇಡಿಕೆಗಳ ಬಗ್ಗೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ಬಜೆಟ್ನಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯವನ್ನು ಘೋಷಿಸಿ 750 ಕೋಟಿಅನುದಾನವನ್ನು […]
ಕುಮಾರಣ್ಣರಿಂದ ಕಾಂಗ್ರೆಸ್‌ಗೆ ಭಿಕ್ಷುಕ ಪಟ್ಟ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಮುಂದಿನ ಲೋಕಸಭೆ ಚುನಾವಣೆಗೆ ಜೆಡಿಎಸ್–ಕಾಂಗ್ರೆಸ್ ಸೀಟು ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಾವು ಭಿಕ್ಷುಕರಲ್ಲ ಎಂದಿದ್ದಾರೆ. ಆದರೆ ಅವರ ಮಾತಿನ ವರಸೆಯನ್ನು ನೋಡಿದರೆ ಪರೋಕ್ಷವಾಗಿ ಕಾಂಗ್ರೆಸ್‌ನ್ನು ಭಿಕ್ಷುಕರೆಂದು ಸಂಭೋದಿಸಿರುವಂತೆ ಕಾಣುತ್ತದೆ. ಸುಮ್ಮನೆ ಕುಮಾರಸ್ವಾಮಿ ಈ ರೀತಿ ಮಾತನಾಡುವವರಲ್ಲ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕುಟುಕಿದರು. ಉಡುಪಿಯಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಶಾಸಕ ಆನಂದ ಸಿಂಗ್ ಹಾಗೂ ಕಂಪ್ಲಿ ಶಾಸಕ ಗಣೇಶ್ ಹೊಡೆದಾಟ ಪ್ರಕರಣ ಅವರ […]
ಫೆ.20: ಜಿಲ್ಲೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಪ್ರವಾಸ

ಉಡುಪಿ: ವಿಧಾನ ಪರಿಷತ್ತಿನ ವಿರೋಧ ಪಕ್ಷದ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಫೆಬ್ರವರಿ 20 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಕೆ.ಎಂ.ಸಿ ಮಣಿಪಾಲದಲ್ಲಿ ಹೋಮ್ ಕೇರ್ ಸರ್ವೀಸಸ್ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 12 ಕ್ಕೆ ಕೋಟೇಶ್ವರ ಪದವಿ ಪೂರ್ವ ಕಾಲೇಜಿನ ಸಮಾರಂಭದಲ್ಲಿ ಭಾಗವಹಿಸಿ ನಂತರ ಕಾರವಾರಕ್ಕೆ ತೆರಳುವರು.
ಬಿಜೆಪಿ ಗುಂಡಿಬೈಲ್ ಮತ್ತು ನಮೋ ಫ್ರೆಂಡ್ಸ್ ದೊಡ್ಡಣ್ಣಗುಡ್ಡೆ ಜಂಟಿ ಆಶ್ರಯದಲ್ಲಿ ಉಚಿತ ವಿದ್ಯುತ್ ಸಂಪರ್ಕ

ಉಡುಪಿ ಜಿಲ್ಲೆಯ ಗುಂಡಿಬೈಲ್ ವಾರ್ಡ್‌ನಲ್ಲಿ ಇಂದು ವಿದ್ಯುತ್ ವಂಚಿತ ಕುಟುಂಬಕ್ಕೆ ಮತ್ತು ಗೋಶಾಲೆಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ಬಿಜೆಪಿ ಗುಂಡಿಬೈಲ್ ವಾರ್ಡ್ ಮತ್ತು ನಮೋ ಫ್ರೆಂಡ್ಸ್ ದೊಡ್ಡಣ್ಣಗುಡ್ಡೆ ತಂಡವು ಜನಪರ ಸೇವೆಗೆ ಸಾಕ್ಷಿಯಾಯಿತು. ಮಲ್ಲಂಪಳ್ಳಿ ನಿವಾಸಿ ಶ್ರೀಮತಿ ಕಮಲ ಎಂಬವರ ಮನೆಗೆ ಮತ್ತು ಸಮೀಪದ ಗೋಶಾಲೆಗೆ ಉಚಿತ ವಿದ್ಯುತ್ ಸಂಪರ್ಕ, ನಳ್ಳಿ ನೀರಿನ ವ್ಯವಸ್ಥೆಯ ಉದ್ಘಾಟನೆ, ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮ ಹಾಗೂ ಗುಂಡಿಬೈಲ್ ವಾರ್ಡ್ ಬಿಜೆಪಿಯ ಕಛೇರಿ ಉದ್ಘಾಟನಾ ಸಮಾರಂಭವನ್ನು ರಘುಪತಿ ಭಟ್ […]
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ 400 ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಮಾಡಿದ ಶಾಸಕ ರಘುಪತಿ ಭಟ್

ದೇಶಾದ್ಯಂತ ಭಾರೀ ಯಶಸ್ಸು ಕಂಡ ಪ್ರಧಾನಮಂತ್ರಿ ನರೇಂದ್ರ ಮೋದಿಯವ ಮಹತ್ವಾಕಾಂಕ್ಷೆಯ ಯೋಜನೆಯಾದ “ಉಜ್ವಲ” ಯೋಜನೆಯಡಿಯಲ್ಲಿ ಉಡುಪಿ ಜಿಲ್ಲೆಯ ಒಟ್ಟು 2000 ಫಲಾನುಭವಿಗಳಿಗೆ ಗ್ಯಾಸ್ ಸೌಲಭ್ಯ ಈಗಾಗಲೇ ಸಿಕ್ಕಿದ್ದು ಇಂದು 400 ಜನರಿಗೆ ಗ್ಯಾಸ್ ವಿತರಣೆಯನ್ನು ಶಾಸಕರಾದ ಶ್ರೀ ರಘುಪತಿ ಭಟ್ ಅವರು ಮಾಡಿದ್ದಾರೆ. ಕೊಕ್ಕರ್ಣೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಕೇಂದ್ರ ಸರಕಾರ ಜನಸಾಮಾನ್ಯರ ಕಣ್ಣೊರೆಸುವ ಕೆಲಸ ಮಾಡುತ್ತಿದೆ, ಒಲೆಯ ಮುಂದೆ ಕೂತು ಕಣ್ಣೀರುಡುತ್ತಿದ್ದ ತಾಯಂದಿರ ಮುಖದಲ್ಲಿ ಇಂದು ಮಂದಹಾಸ ಕಾಣುತ್ತಿದೆ, ಯಾಕೆಂದರೆ […]