ಪ್ರಸ್ತುತ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾನೂನು ರದ್ದು ಮಸೂದೆ ಮಂಡನೆ ಇಲ್ಲ: ವರದಿ

ಬೆಂಗಳೂರು: ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಬಲವಂತದ ಮತಾಂತರ ನಿಷೇಧ ಕಾನೂನು ಮಸೂದೆಯನ್ನು ರದ್ದುಗೊಳಿಸುವ ಜೂನ್ 15 ರ ಕ್ಯಾಬಿನೆಟ್ ನಿರ್ಧಾರದ ಹೊರತಾಗಿಯೂ ರಾಜ್ಯ ವಿಧಾನಮಂಡಲದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮಂಡಿಸದಿರಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಕೆಲವು ದಿನಗಳ ಹಿಂದೆ ಸಿದ್ಧಪಡಿಸಿದ ಕರಡು ಮಸೂದೆಯನ್ನು ಸರ್ಕಾರವು ಹಿಂತೆಗೆದುಕೊಂಡಿದೆ […]

ನಾಳೆ (ಜು.14) ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಗೆ; ಪ್ರಬುದ್ಧರ ಗೋಷ್ಠಿಯಲ್ಲಿ ಭಾಗಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಮತ್ತು ಪ್ರಬುದ್ಧರ ಗೋಷ್ಠಿಯನ್ನುದ್ದೇಶಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜು.14ರಂದು ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು. ಅವರು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಉಡುಪಿ ನಗರ ಮಂಡಲದ ಸಭೆಯಲ್ಲಿ ಭಾಗವಹಿಸಿ, ‘ಮಹಾ ಸಂಪರ್ಕ […]

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಹಿಂದೂಗಳ ಅಮಾನುಷ ಹತ್ಯೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಲೆ ಗಡುಕರಿಗೆ, ಭಯೋತ್ಪಾದಕರಿಗೆ ಬಲ ನೀಡಿದಂತೆ ಎಂಬುದಕ್ಕೆ ಕಾಂಗ್ರೆಸ್ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದ ಎರಡೇ ತಿಂಗಳಲ್ಲಿ ರಾಜ್ಯದಲ್ಲಿ ಜೈನ ಮುನಿ ಮತ್ತು ಹಿಂದೂ ಕಾರ್ಯಕರ್ತನ ಅಮಾನುಷ ಹತ್ಯೆ ನಡೆದಿರುವುದು ಜ್ವಲಂತ ನಿದರ್ಶನವಾಗಿದೆ. ಹಂತಕರಿಗೆ ಕಾನೂನಿನ ಭಯವಿಲ್ಲದೆ ಇಂತಹ ಭೀಕರ ಕೊಲೆಗಳು ನಿರಂತರ ನಡೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ‌ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ್ […]

ಕಾಂಗ್ರೆಸ್ ನದ್ದು ನಿರಾಶಾದಾಯಕ ಗೊಂದಲಭರಿತ ಬಜೆಟ್: ನಯನಾ ಗಣೇಶ್

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಬಾರಿಯ ಬಜೆಟ್ ನಿರಾಶಾದಾಯಕವಾಗಿದ್ದು, ಬಿಜೆಪಿ ಸರ್ಕಾರದ ಅನೇಕ ಜನಪರ ಯೋಜನೆಗಳಿಗೆ ತಿಲಾಂಜಲಿ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಬಜೆಟ್ ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈ ಬಿಡುವ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸುವ ಕಾರ್ಯ ಮಾಡಿದೆ. ವಿವೇಕ ಶಾಲೆ ಅಭಿವೃದ್ಧಿ ಯೋಜನೆ ರದ್ದು, ಅಗ್ನಿವೀರ್ ತರಬೇತಿ ಯೋಜನೆ, ಸ್ವಾಮಿ ವಿವೇಕಾನಂದರ ಯುವಶಕ್ತಿ ಯೋಜನೆ, ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆ, […]

ಐದು ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ಅಭ್ಯರ್ಥಿಗಳ ನೇಮಕಕ್ಕೆ ಬಿಜೆಪಿ ಸಿದ್ದತೆ; ಒಕ್ಕಲಿಗ ಸಮುದಾಯಕ್ಕೆ ದೊರೆಯಲಿದೆಯೆ ರಾಜ್ಯದ ಚುಕ್ಕಾಣಿ?

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಭಾರತೀಯ ಜನತಾ ಪಕ್ಷವು ಐದು ರಾಜ್ಯಗಳಲ್ಲಿ ತನ್ನ ರಾಜ್ಯ ಘಟಕಗಳಿಗೆ ಹೊಸ ಅಧ್ಯಕ್ಷರ ನೇಮಕಗಳನ್ನು ಕೈಗೊಳ್ಳಲಿದೆ. ಗುಜರಾತ್, ತೆಲಂಗಾಣ, ಪಂಜಾಬ್, ಮಧ್ಯಪ್ರದೇಶ ಮತ್ತು ಕರ್ನಾಟಕಕ್ಕೆ ಹೊಸ ರಾಜ್ಯಾಧ್ಯಕ್ಷರನ್ನು ಹೆಸರಿಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಜಿ ಕಿಶನ್ ರೆಡ್ಡಿ ಅವರನ್ನು ತೆಲಂಗಾಣ ಘಟಕದ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಬಹುದು ಮತ್ತು ಪಂಜಾಬ್ ಘಟಕದ ಮುಖ್ಯಸ್ಥರಾಗಿ ಸುನೀಲ್ ಜಾಖರ್ ಅವರಿಗೆ ಜವಾಬ್ದಾರಿಯನ್ನು ನೀಡಬಹುದು. ಇದೇ ವೇಳೆ ಅಶ್ವಥ್ ನಾರಾಯಣ್ ಅಥವಾ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ಕರ್ನಾಟಕ […]