ಉಡುಪಿ ಜಿಲ್ಲಾ ಬಿಜೆಪಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಆಚರಿಸಲಾಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜ್ಯೋತಿ ಬೆಳಗಿಸಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, […]
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಒಪ್ಪದ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ಪಕ್ಷದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿದು ಬಡವರ ಅನ್ನ ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದಿಂದ ಮೆರವಣಿಗೆಯಲ್ಲಿ ಹೊರಟು ಬ್ರಹ್ಮಗಿರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ […]
ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರ ಹಾಕಿದ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ; ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರಿಗೆ ಜಾಮೀನು

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಳಿಕ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್ ರೆಡ್ಡಿ ಹಾಗೂ ಕಾನ್‌ಸ್ಟೆಬಲ್ […]
ಮತಾಂತರ ನಿಷೇಧ ಕಾಯ್ದೆ ವಾಪಸ್ ವಿರುದ್ದ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ; ಜಿಲ್ಲಾ ಬಿಜೆಪಿಯಿಂದ ಬೆಂಬಲ: ಕುಯಿಲಾಡಿ

ಉಡುಪಿ: ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸು ಪಡೆದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಜೂ.19 ಸೋಮವಾರ ಸಂಜೆ 4.00 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ, ಮಣಿಪಾಲದ ರಜತಾದ್ರಿಯ ಬಳಿ ನಡೆಯುವ ಬೃಹತ್ ಪ್ರತಿಭಟನೆಗೆ ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, […]
ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಖಂಡನೀಯ: ವೀಣಾ ಎಸ್. ಶೆಟ್ಟಿ

ಉಡುಪಿ: ಸದಾ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯ್ದೆಗೆ ಈ ಹಿಂದೆ ಬಿಜೆಪಿ ಸರಕಾರ ತಂದಿರುವ ತಿದ್ದುಪಡಿಯನ್ನು ವಾಪಾಸು ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ಈಗಾಗಲೇ ಸಮಾಜದಲ್ಲಿ ಲವ್ ಜಿಹಾದ್ ಮತ್ತು ಆಮಿಷದ ಮುಖಾಂತರ ಮೋಸದ ಮತಾಂತರ ಅವ್ಯಾಹತವಾಗಿ ನಡೆಯುತ್ತಿದ್ದು ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ […]