ಬಿಜೆಪಿ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್…

ಬೆಂಗಳೂರು:ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್​ ಸೇರಿದರು. ಇದರೊಂದಿಗೆ 35 ವರ್ಷಕ್ಕೂ ಹೆಚ್ಚು ಕಾಲ ಬಿಜೆಪಿಯೊಂದಿಗಿನ ನಂಟು ಕಳೆದುಕೊಂಡರು. ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಮಾಜಿ ಸಿಎಂ ಜಗದೀಶ್​ ಶೆಟ್ಟರ್, ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. […]