‘ನಾವೇನೂ ಬಳೆ ತೊಟ್ಟಿಲ್ಲ’ ಎಂಬುದು ಆಡು ಭಾಷೆ; ಬಿಜೆಪಿ ಜಿಲ್ಲಾಧ್ಯಕ್ಷರ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ: ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿರುಗೇಟು

ಉಡುಪಿ: ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಆರ್.ಎಸ್.ಎಸ್. ಮತ್ತು ಭಜರಂಗ ದಳವನ್ನು ನಿಷೇಧಿಸುವ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ಖಂಡಿಸುವ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ಆಡು ಭಾಷೆಯಲ್ಲಿ ‘ನಾವೇನೂ ಬಳೆ ತೊಟ್ಟಿಲ್ಲ’ ಎಂದಿರುವ ಕ್ಷುಲ್ಲಕ ವಿಚಾರವನ್ನು ದೊಡ್ಡ ವಿವಾದವನ್ನಾಗಿಸಲು ಹೊರಟಿರುವ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆಯವರ ನಡೆಯನ್ನು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತೀಕ್ಷ್ಣವಾಗಿ ಖಂಡಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ ಎಂದು ತಿರುಗೇಟು ನೀಡಿದ್ದಾರೆ. ಉಚಿತ […]